ವೆನ್ಲಾಕ್‌ನಲ್ಲಿ ಶೀಘ್ರ ಪ್ಲಾಸ್ಮಾ ಥೆರಪಿ ಕೇಂದ್ರ

blood camp
Published on

ಮಂಗಳೂರು: ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಕೇಂದ್ರ ಆರಂಭಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗಿದೆ. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅಧಿಕಾರಿಗಳು ಪರಿಶೀಲಿಸಿದ್ದು, ಶೀಘ್ರ ಅನುಮತಿ ನೀಡುವ ನಿರೀಕ್ಷೆಯಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು.

ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಘಟಕ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾಯಕ್ರಮದಲ್ಲಿ ಮಾತನಾಡಿದರು.

ಒಂದು ವರ್ಷದ ಅವಧಿಯಲ್ಲಿ 100ಕ್ಕೂ ಅಧಿಕ ಯೂನಿಟ್ ರಕ್ತ ಸಂಗ್ರಹಿಸಿದ 18 ಸಂಘ ಸಂಸ್ಥೆಗಳ ಪ್ರಮುಖರನ್ನು ಗೌರವಿಸಲಾಯಿತು. ಕರೊನಾ ಗೆದ್ದು ಪ್ಲಾಸ್ಮಾ ದಾನ ಮಾಡಿದ 10 ಮಂದಿಯನ್ನು ಅಭಿನಂದಿಸಲಾಯಿತು. ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯ ಮುಖ್ಯಸ್ಥೆ ಸುಜಯಾ ಯು.ಶೆಟ್ಟಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಮೋನಾ ರಾವ್, ಬ್ಲಡ್ ಬ್ಯಾಂಕ್ ಉಪ ಸಮಿತಿ ಮುಖ್ಯಸ್ಥ ಡಾ.ಯು.ವಿ.ಶೆಣೈ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಜಿಲ್ಲಾ ಘಟಕ ಗೌರವ ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ ಸ್ವಾಗತಿಸಿದರು. ಯತೀಶ್ ಬೈಕಂಪಾಡಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net