ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಫಲಕ ಅನಾವರಣ : ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆಯನ್ವಯ ಕ್ರಮ

04
Published on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಅಭಿಯಾನಕ್ಕೆ ಸಂಬಂಧಿಸಿ ಬೇಕಾದ ವ್ಯವಸ್ಥೆ ಮತ್ತು ಸಿದ್ಧತೆಗಳನ್ನು ಶ್ರೀ ದೇಗುಲದ ಆಡಳಿತ ಮಂಡಳಿ ಮಾಡಿದೆ.

ಭಕ್ತರಲ್ಲೂ ಜಾಗೃತಿ ಮೂಡಿಸಲು ಸೂಚನಾ ಫಲಕ ಮತ್ತು ಜಾಗೃತಿ ಫಲಕವನ್ನು ಅಳವಡಿಸಲಾಗಿದೆ. ಶ್ರೀ ದೇಗುಲದ ರಾಜಗೋಪುರದ ಇಕ್ಕೆಲಗಳಲ್ಲಿ, ರಥಬೀದಿ, ಪಾಕಿರ್ಂಗ್ ಸ್ಥಳ, ಆದಿಸುಬ್ರಹ್ಮಣ್ಯ, ಕುಮಾರಧಾರಾ ಸ್ನಾನಟ್ಟ ಮೊದಲಾದ ಕಡೆ ಜಾಗೃತಿ ಫಲಕ ಮತ್ತು ಸೂಚನಾ ಫಲಕ ಅಳವಡಿಸಲಾಗಿದೆ.

ಪರಿಸರದ ಅಂಗಡಿಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಕಡ್ಡಾಯವಾಗಿ ನಿಬರ್ಂಧಿಸಲಾಗುತ್ತದೆ. ಬಳಕೆ ಕಂಡು ಬಂದಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾಯ್ದೆಗಳ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂಬ ಕರಪತ್ರವನ್ನು ಅಂಗಡಿ, ಹೊಟೇಲ್ ಸೇರಿದಂತೆ ಸರ್ವರಿಗೂ ಹಂಚಲಾಗಿದೆ.

ಕುಕ್ಕೆಯಲ್ಲಿ ಸ್ವಾತಂತ್ರ್ಯೋತ್ಸವದ ದಿನದಂದು ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆಗೆ ಅಭಿಯಾನದ ಮೂಲಕ ಪ್ಲಾಸ್ಟಿಕ್ ಮುಕ್ತ ದೇವಸ್ಥಾನವನ್ನಾಗಿ ೋಷಣೆ ಮಾಡಲಾಗಿದೆ. ಸರ್ವ ಭಕ್ತರ ಸಹಕಾರದಿಂದ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಅಭಿಯಾನ ಯಶಸ್ವಿಯಾಗುವುದು. ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ಹತ್ತಿಕ್ಕಲು ದೇಗುಲದೊಂದಿಗೆ ಕೈ ಜೋಡಿಸಬೇಕು. ಭಕ್ತರಲ್ಲಿ ಜಾಗೃತಿ ಮೂಡಿಸಲು ಅಲ್ಲಲ್ಲಿ ಜಾಗೃತಿ ಫಲಕ ಅಳವಡಿಸಲಾಗಿದೆ. ಹರೀಶ್.ಎಸ್. ಇಂಜಾಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net