

ಮಲೇಬೆನ್ನೂರು: ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ಜು.1ರಿಂದ 28 ರವರೆಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ನವೀನ್ ಕಟ್ಟಿಮನಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ನಿಂದ ತಯಾರಿಸಿದ ಉತ್ಪನ್ನಗಳಾದ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್ಗಳು, ಬಂಟಿಂಗ್ಸ್, ಫ್ಲೆಕ್ಸ್, ಪ್ಲೇಟ್, ಧ್ವಜ, ಕಪ್, ಸ್ಪೂನ್, ಅಂಟಿಕೊಳ್ಳುವ ಫಿಲ್ಗಳು, ಡೈನಿಂಗ್ ಟೇಬಲ್ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಪ್ಲಾಸ್ಟಿಕ ಕ್ಯಾಂಡಿ ಸ್ಟಿಕ್, ಸ್ಟಾ›, ಇಯರ್ಬಡ್ಸ್, ಸ್ಪೀಕರ್, ಥರ್ವಕೋಲ್ ಮತ್ತು ಪ್ಲಾಸ್ಟಿಕ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.
ಮೇಲಿನ ಎಲ್ಲ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು, ಅಂಗಡಿ ಮಾಲಿಕರುಗಳು, ಇ-ಕಾಮರ್ಸ್ ಕಂಪನಿ, ಬೀದಿ ವ್ಯಾಪಾರಿ, ವಾಣಿಜ್ಯ ಸಂಸ್ಥೆ, ಮಾಲ್, ಮಾರುಕಟ್ಟೆ, ಶಾಪಿಂಗ್ ಕೇಂದ್ರ, ಸಿನಿಮಾ ಥಿಯೇಟರ್, ಪ್ರವಾಸೋದ್ಯಮ ಸ್ಥಳ, ಶಾಲಾ-ಕಾಲೇಜು, ಆಸ್ಪತ್ರೆಗಳು, ಸಂಸ್ಥೆಗಳು ಮತ್ತು ಸಾರ್ವಜನಿಕರು ಬಳಕೆ ಮಾಡದಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಯಂತೆ ಪ್ರತಿ ಟನ್ಗೆ ರೂ. 5000 ರಂತೆ ದಂಡ ವಿಧಿಸಲಾಗುವುದು ಎಂದು ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.