ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ

prathibha karanji
ಕೊಕ್ಕರ್ಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಬ್ರಹ್ಮಾವರದ ಕ್ಷೇತ್ರದ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಉದ್ಘಾಟಿಸಿದರು
Published on

ಕೊಕ್ಕರ್ಣೆ: ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಬ್ರಹ್ಮಾವರದ ಕ್ಷೇತ್ರದ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಹೇಳಿದರು.

ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಗುರುವಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಜಯಂತ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ವಸಂತ ಸೇರ್ವೇಗಾರ್, ಪ್ರಜ್ವತ್ ಕೆ.ಎಸ್., ಎಸ್‌ಡಿಎಂಸಿ ಉಪಾಧ್ಯಕ್ಷ ಉದಯ ನಾಯಕ್, ಪ್ರಾಂಶುಪಾಲ ಪ್ರಕಾಶ್ ಶೆಟ್ಟಿ, ಉಪಪ್ರಾಂಶುಪಾಲ ಈಶ್ವರ ಅಂಬಿಗ, ನಿವೃತ್ತ ಶಿಕ್ಷಕ ಸಂಜೀವ ಮಾಸ್ಟರ್, ಬಿಆರ್‌ಪಿ ಉದಯ ಕೋಟ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗುಣಕರ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಮರಕಾಲ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ವಸಂತ ನಾಯ್ಕ ಒಳಬೈಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ಉಪಾಧ್ಯಕ್ಷ ವನಿತಾ ಶೆಟ್ಟಿ ಉಪಸ್ಥಿತರಿದ್ದರು. ಸಿಆರ್‌ಪಿ ಪ್ರತಿಭಾ ಪ್ರಸ್ತಾವನೆಗೈದು, ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು. ಸಹಶಿಕ್ಷಕಿ ಭಾರತಿ ವಂದಿಸಿದರು. ಮೊಗವೀರಪೇಟೆ ಶಾಲಾ ಸಹಶಿಕ್ಷಕ ಸುರೇಂದ್ರ ನಾಯ್ಕ, ಕೆಪಿಎಸ್ ಕೊಕ್ಕರ್ಣೆ ಭಾಸ್ಕರ ಪೂಜಾರಿ ನಿರೂಪಿಸಿದರು.

ಗೌರವ

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೆಪಿಎಸ್ ಶಾಲೆ ಶಿಕ್ಷಕ ಭಾಸ್ಕರ ಪೂಜಾರಿ, ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ವರದರಾಜ್, ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕಿ ಶ್ರೀವೇಣಿ ರಾವ್ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net