

ಹುಕ್ಕೇರಿ: ಸರ್ಕಾರದ ಆದೇಶದ ಮೇರೆಗೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗಾಗಿ ಸಮಗ್ರ ಸಮೀಕ್ಷೆ ನಡೆಸಲು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ತಾಲೂಕಿನ ಎಲ್ಲ ಜನರು ಮಾಹಿತಿ ನೀಡಿ ಸಹಕರಿಸಬೇಕೆಂದು ತಹಸೀಲ್ದಾರ್ ಮಂಜುಳಾ ನಾಯಿಕ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾತಿಗಳ ಸಮಗ್ರ ದತ್ತಾಂಶ ಸಂಗ್ರಹಕ್ಕಾಗಿ ಮನೆಮನೆಗೆ ಶಿಕ್ಷಕರು ಬರುತ್ತಿದ್ದಾರೆ. ಸರಿಯಾದ ಮಾಹಿತಿ ನೀಡಿ ಸಮೀಕ್ಷೆಗೆ ಸಹಕರಿಸಬೇಕು ಎಂದರು. ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಚ್.ಎ.ಮಾಹುತ, ಉಪತಹಸೀಲ್ದಾರ್ ಎನ್.ಆರ್.ಪಾಟೀಲ, ಚುನಾವಣಾ ವಿಭಾಗದ ಸಂತೋಷ ನಾಯ್ಕರ ಇದ್ದರು.