ಸ್ವಚ್ಛತಾ ಅಭಿಯಾನದ ಪ್ರತಿಜ್ಞಾವಿಧಿ ಬೋಧನೆ

ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ವಚ್ಛತಾ ಅಭಿಯಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ವಚ್ಛತಾ ಅಭಿಯಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
Published on

ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯದ ಗದ್ದೆಹಳ್ಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಆರೋಗ್ಯ ಮಾಹಿತಿ, ಸಾಂಕ್ರಾಮಿಕ ರೋಗಗಳು ಮತ್ತು ಅಸಾಂಕ್ರಾಮಿಕ ರೋಗಗಳ ಬಗ್ಗೆ ವಿವರಣೆ ನೀಡಿದರು. ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ತಾಯಿ ಮಾಡಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದರ ಜತೆಗೆ ಸ್ವಚ್ಛತಾ ಅಭಿಯಾನದ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಗತಿ ನಿಧಿ, ದತ್ತಾಂಶ, ವಾರದ ಸಭೆಯ ಮಹತ್ವ, ವಿನಿಯೋಗದಾರರ ಬದಲಾವಣೆಯಾದ ಬಗ್ಗೆ ವಲಯ ಮೇಲ್ವಿಚಾರಕರು ಮಾಹಿತಿ ನೀಡಿದರು.
ಮುಖ್ಯ ಅತಿಥಿ ಸಾವಿತ್ರಿ ಮಾತನಾಡಿ, ಸಂಘವು ಒಳ್ಳೆಯ ರೀತಿಯಲ್ಲಿ ನಡೆಯಬೇಕಿದ್ದಲ್ಲಿ ಶಿಸ್ತು ಮತ್ತು ಸಂಯಮ ಅಗತ್ಯ ಎಂದರು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಉಪಾಧ್ಯಕ್ಷ ಆನಂದ ವಹಿಸಿದ್ದರು. ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಭವ್ಯಾ, ಸೇವಾಪ್ರತಿನಿಧಿ ಜ್ಯೋತಿ ಲಕ್ಷ್ಮೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net