14ಕ್ಕೆ ಸರ್ವಸದಸ್ಯರ ಸಭೆ

Published on

ನಂಜನಗೂಡು: ನಗರದ ವಿದ್ಯಾನಗರ ಬಡಾವಣೆಯಲ್ಲಿರುವ ಶ್ರೀ ಗುರುಮಲ್ಲೇಶ್ವರ ವಿವಿಧೋದ್ದೇಶ ಮಹಿಳಾ ಸೌಹಾರ್ದ ಸಹಕಾರ ಸಂಘದ 2023-24ನೇ ಸಾಲಿನ 10ನೇ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಜುಲೈ 14ರಂದು ನಡೆಯಲಿದೆ.

ಅಂದು ಬೆಳಗ್ಗೆ 10.30ಕ್ಕೆ ನಗರದ ನಂದಿ ಕನ್ವೆನ್ಷನ್ ಹಾಲ್‌ನಲ್ಲಿ ಸಂಘದ ಅಧ್ಯಕ್ಷೆ ನಂದಿನಿ ಮಹೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ವಾರ್ಷಿಕ ಆಯವ್ಯಯ ಮಂಡಿಸಲಿದ್ದಾರೆ. ಜತೆಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net