ಆಯುರ್ವೇದ ಔಷಧ ತಯಾರಕ ಕಾರ್ಖಾನೆಯ ಮೇಲೆ ಪಾಲಿಕೆ ಅಧಿಕಾರಿಗಳು ದಾಳಿ

IMG-20230713-WA0025.jpg
Published on


ಬೆಳಗಾವಿ: ಮಹಾನಗರ ಪಾಲಿಕೆಯಿಂದ ಪರವಾನಗಿ ನವೀಕರಣ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿದ್ದ ಆಯುರ್ವೇದ ಸಿದ್ದ ಮತ್ತು ಯುನಾನಿ ಔಷಧಿಗಳ ತಯಾರು ಮಾಡುವ ಕಾರ್ಖಾನೆಯ ಮೇಲೆ ಗುರುವಾರ ಪಾಲಿಕೆ ಅಧಿಕಾರಿಗಳು, ಸದಸ್ಯರು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ಪಾಲಿಕೆಯ ಆರೋಗ್ಯ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ದಾಳಿ ವೇಳೆ ಕಾರ್ಖಾನೆ ಮಾಲೀಕರು ಒಂದು ವರ್ಷದಿಂದ ಪರವಾನಗಿ ನವೀಕರಣ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿದೆ. ಹಾಗಾಗಿ ಕಾರ್ಖಾನೆ ಬಂದ್ ಮಾಡಿ ಕ್ರಮ ಜರುಗಿಸಲಾಗಿದೆ ಎಂದು ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ, ಅಧಿಕಾರಿಗಳು ‌ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net