

ಬೆಳಗಾವಿ: ನಾಮಫಲಕಗಳಲ್ಲಿ ಕನ್ನಡ ಬಳಕೆಮಾಡದಿರುವ ಅಂಗಡಿ ಮುಂಗಟ್ಟುಗಳಿಗೆ ಬೆಳ್ಳಂ ಬೆಳಗ್ಗೆ ಪಾಲಿಕೆ ಆಯುಕ್ತ ಪಿ.ಎನ್.ಲೋಕೇಶ್ ನೇತೃತ್ವದ ತಂಡ ಬಿಸಿ ಮುಟ್ಟಿಸಿದೆ.
ನಗರದಲ್ಲಿರುವ ವಾಣಿಜ್ಯ ಮಳಿಗೆಗಳು ಹಾಗೂ ಅಂಗಡಿ–ಮುಂಗಟ್ಟುಗಳ ನಾಮಫಲಕದಲ್ಲಿ ಸರ್ಕಾರಿ ನಿಯಮಾನುಸಾರ ಶೇ.60ರಷ್ಟು ಕನ್ನಡ ಬಳಕೆ ಮಾಡದಿರುವುದಕ್ಕೆ ನೋಟಿಸ್ ನೀಡಿದ್ದರು. ಆದರೆ, ಅಂಗಡಿಕಾರರು ಕ್ಯಾರೆ ಎಂದಿರಲಿಲ್ಲ. ಅಂತಹ ಅಂಗಡಿಗಳಿಗೆ ಶುಕ್ರವಾರ ಬೆಳ್ಳಂ ಬೆಳಗ್ಗೆ ನಾಮಫಲಕ ತೆರವುಗೊಳಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ..