

-ಜನರ ದಶಕಗಳ ಹೋರಾಟಕ್ಕೆ ಸಿಕ್ಕ ಫಲ
ಬೆಳಗಾವಿ: ಮೂರು ಜಿಲ್ಲೆಗಳ ಕೇಂದ್ರ ಸ್ಥಾನ, ವಾಣಿಜ್ಯ ವಲಯವಾಗಿರುವ ಯರಗಟ್ಟಿ ಪಟ್ಟಣದ ಹೊರ ಠಾಣೆಯನ್ನು ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಸವದತ್ತಿ ಮತ್ತು ಮುರಗೋಡೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳು ಗಣನೀಯವಾಗಿ ಏರಿಕೆ, ಜನಸಂಖ್ಯೆ ಕೂಡ ಹೆಚ್ಚಾಗಿವೆ. ಅಲ್ಲದೆ, ರೈತ ಪರ ಸೇರಿ ವಿವಿಧ ಸಂಘಟನೆಗಳ ನಿರಂತರ ಹೋರಾಟ, ಕಚೇರಿಗಳ ಮುತ್ತಿಗೆ ಹಾಕುತ್ತಿರುವ ನಿಯಂತ್ರಿಸುವ ನಿಟ್ಟಿನಲ್ಲಿ ಸವದತ್ತಿ ಪೊಲೀಸ್ ಠಾಣೆಯ ವ್ಯಾಪ್ತಿಯ 6 ಗ್ರಾಮಗಳು, ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯ 33 ಗ್ರಾಮಗಳನ್ನು ಸೇರಿಸಿ ಒಟ್ಟು 39 ಗ್ರಾಮಗಳನ್ನು ಒಳಗೊಂಡಂತೆ ಯರಗಟ್ಟಿ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.
...............
ಕಳೆದ ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮತದಾರರಿಗೆ ಮಾತುಕೊಟ್ಟಂತೆ ಯರಗಟ್ಟಿ ಹೊರ ಠಾಣೆಯನ್ನು ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ಮಾತು ಉಳಿಸಿಕೊಂಡಿದ್ದೇನೆ. ಈ ಭಾಗದ ಜನರ ದಶಕಗಳ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕ್ಷೇತ್ರದ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದಜ ಶಾಸಕ ವಿಶ್ವಾಸ ವೈದ್ಯ ತಿಳಿಸಿದ್ದಾರೆ.
...........