ಬದುಕಿನ ಪರ್ವ ಮುಗಿಸಿದ ಕನ್ನಡದ ಶ್ರೇಷ್ಠ ಸಾಹಿತಿ ಎಸ್​.ಎಲ್​ ಭೈರಪ್ಪ ನಿಧನಕ್ಕೆ ಪಿಎಂ, ಸಿಎಂ ಸಂತಾಪ | S.L. Bhyrappa

S.L. Bhyrappa
Published on

S.L. Bhyrappa: ಇಂದು ಕನ್ನಡದ ಶ್ರೇಷ್ಠ ಕಾದಂಬರಿಕಾರ ಶ್ರೀ ಎಸ್.ಎಲ್. ಭೈರಪ್ಪನವರ ನಿಧನದ ಸುದ್ದಿ ಕೇಳಿ ನಮ್ಮ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ (ಸೆಪ್ಟೆಂಬರ್​,24) ಮೋದಿ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಪ್ರಧಾನಿ, ಶ್ರೀ ಎಸ್.ಎಲ್. ಭೈರಪ್ಪ ಜಿ ಅವರ ನಿಧನದಿಂದ, ನಮ್ಮ ಆತ್ಮಸಾಕ್ಷಿಯನ್ನು ಕಲಕಿದೆ. ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಅಲ್ಲದೆ, ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಭೈರಪ್ಪನವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಆಳವಾಗಿ ಶ್ರೀಮಂತಗೊಳಿಸಿದ್ದರು. ಇವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಇದರೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು ಎಂದು ಹೇಳಿದ್ದಾರೆ.

ಅಲ್ಲದೆ, ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಭೈರಪ್ಪನವರ ಅಚಲವಾದ ಉತ್ಸಾಹವು ಮುಂಬರುವ ವರ್ಷಗಳಲ್ಲಿ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ ಎಂದು ಪ್ರಧಾನಿ ಮೋದಿ ನಿಧಾನಕ್ಕೆ ಸಂತಾಪ ಸೂಚಿಸಿದ್ದಾರೆ.

ಭೈರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಅಲ್ಲದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಭೈರಪ್ಪನವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಭೈರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ ಎಲ್ ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಜ್ಯೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ, ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ರಾಜ್ಯೋತ್ಥಾನ ಅಸ್ಪತ್ರೆ ಕೂಡ ಸಂತಾಪ ಸೂಚಿಸಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ ಭಾರತದ ಪ್ರಸಿದ್ಧ ಕಾದಂಬರಿಕಾರ, ತತ್ವಜ್ಞಾನಿ, ಪದ್ಮಶ್ರೀ, ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಶ್ರೀ ಎನ್ ಎಲ್ ಭೈರಪ್ಪ ಅವರು ಇಂದು ಮಧ್ಯಾಹ್ನ 2.38 ಕ್ಕೆ ಹೃದಯಸ್ತಂಭನದಿಂದ ಸರ್ವಶಕ್ತನ ಪಾದ ಕಮಲವನ್ನು ತಲುಪಿದರು. ಅವರ ಆತ್ಮಕ್ಕೆ ಓಂ ಶಾಂತಿ ಎಂದು ಹೇಳಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net