PM Condolences ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

PM Condolences
Published on

ಕಾರವಾರ /PM Condolences : ವೃಕ್ಷ ಮಾತೆ, ಪದ್ಮಶ್ರೀ ತುಳಸಿ ಗೌಡ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅವರು ಅಂಕೋಲಾಕ್ಕೆ ಬಂದ ಸಂದರ್ಭದಲ್ಲಿ ತುಳಸಿ ಅವರನ್ನು ಭೇಟಿಯಾಗಿದ್ದ ಫೋಟೋದೊಂದಿಗೆ ತಮ್ಮ ಎಕ್ಸ್ ಖಾತೆಯಲ್ಲಿ ಕನ್ನಡದಲ್ಲಿ ಸಂತಾಪ ಸಂದೇಶವನ್ನು ಮೋದಿ ಪೋಸ್ಟ್ ಮಾಡಿದ್ದಾರೆ.

PM Condolences

ಕರ್ನಾಟಕದ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಅವರ ನಿಧನ ತೀವ್ರ ದುಖಃ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿಯ ಪೋಶಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ, ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರದ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂ ಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಸಂದೇಶ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net