

ಮಡಿಕೇರಿ:
ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು.
ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮ ತಲುಪಿಸುವುದು, ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು, ನಾಗರಿಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ವಸತಿ ಯೋಜನೆ, ಅಲ್ಪಸಂಖ್ಯಾತರ ಜೀವನ ಮಟ್ಟ ಸುಧಾರಿಸಲು ವಸತಿ ಯೋಜನೆ ಕಲ್ಪಿಸುವುದು, ಹೀಗೆ ಹಲವು ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವಂತೆ ನಿರ್ದೇಶನ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ಮಾಹಿತಿ ನೀಡಿ ಇಲಾಖೆಯಿಂದ ಪೂರಕ ಪೌಷ್ಠಿಕ ಆಹಾರ ಕಲ್ಪಿಸುವುದು, ಪ್ರಧಾನಮಂತ್ರಿ ಅವರ ಮಾತೃವಂದನಾ ಯೋಜನೆ ತಲುಪಿಸುವುದು ಸೇರಿದಂತೆ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಮಾತನಾಡಿ ಶಾಲೆಗಳಲ್ಲಿ ಸಮವಸ್ತç, ಉಚಿತ ಪಠ್ಯಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾಹಿತಿ ನೀಡಿ ಕೃಷಿ ಇಲಾಖೆ ಸೂಕ್ಷö್ಮ ನೀರಾವರಿ, ಕೃಷಿ ಯಾಂತ್ರೀಕರಣ, ಬಿತ್ತನೆ ಬೀಜ ವಿತರಣೆ ಹೀಗೆ ಹಲವು ಕಾರ್ಯಕ್ರಮ ತಲುಪಿಸಲಾಗುತ್ತಿದೆ ಎಂದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಮುತ್ತಪ್ಪ ಮಾತನಾಡಿ ಇಲಾಖೆಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಸಾಕಾಣಿಕೆ, ರಾಷ್ಟಿçÃಯ ಖಾದ್ಯತೈಲ ಅಭಿಯಾನದಡಿ ತಾಳೆಬೆಳೆ ಯೋಜನೆ ಅನುಷ್ಠಾನ ಸಹಾಯಧನ ಹೀಗೆ ಹಲವು ಯೋಜನೆ ತಲುಪಿಸಲಾಗುತ್ತಿದೆ ಎಂದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಆರ್.ಕೃಷ್ಣಮೂರ್ತಿ ಮಾಹಿತಿ ನೀಡಿ ಶ್ರಮಶಕ್ತಿ, ಸ್ವಾವಲಂಭಿ ಸಾರಥಿ, ವೃತ್ತಿ ಪ್ರೋತ್ಸಾಹ, ಅರಿವು, ನೇರಸಾಲ ಯೋಜನೆ, ಉನ್ನತ ಶಿಕ್ಷಣಕ್ಕೆ ಸಾಲ ಯೋಜನೆ ಹೀಗೆ ಹಲವು ಯೋಜನೆ ತಲುಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಮುರಾರ್ಜಿ ದೇಸಾಯಿ ವಸತಿ ಶಾಲೆಗಳು, ಮೌಲನಾ ಆಜಾದ್ ವಸತಿ ಶಾಲೆಗಳ ಅಭಿವೃದ್ಧಿ ಸಂಬAಧಿಸಿದAತೆ ಮಾಹಿತಿ ನೀಡಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ ಸ್ಥಳೀಯ ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಶಸ್ತç ಚಿಕಿತ್ಸೆಗೆ ಸಹಾಯಧನ, ವೈದ್ಯಕೀಯ ಧನ, ಲಘು ವಾಹನ ಚಾಲನಾ ತರಬೇತಿ, ಇತರೆ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಸಚಿನ್ ಮೀನುಗಾರಿಕೆ ಸಲಕರಣೆ ವಿತರಣೆ, ಮತ್ಸö್ಯಸಂಪದ ಯೋಜನೆ ಸಹಾಯಧನ ಇತರೆ ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧನರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕರಾದ ರಘು, ಉದ್ಯೋಗ ವಿನಿಮಯಾಧಿಕಾರಿ ಅವರು ರೇಖಾ, ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ಇತರರು ಇದ್ದರು.