ಸಿದ್ಧಗಂಗಾ ಶ್ರೀಗೆ ಪ್ರಧಾನಿ ಮೋದಿ ಗೌರವ

Modi
Published on

ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 113ನೇ ಜನ್ಮಜಯಂತಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶ್ರೀಗಳಿಗೆ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.

‘ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ’ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿ ಶ್ರೀಗಳಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ತ್ರಿವಿಧ ದಾಸೋಹದ ಮೂಲಕ ಲೋಕಮಾನ್ಯರಾಗಿದ್ದ ಶಿವಕುಮಾರ ಶ್ರೀಗಳ ಜನ್ಮದಿನವಾದ ಏ.1ರಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಸಲ್ಲಿಸುತ್ತಿದ್ದರು.

ಶ್ರೀಗಳು ಲಿಂಗೈಕ್ಯರಾದ ಬಳಿಕ 2ನೇ ಜನ್ಮಜಯಂತಿ ಇದಾಗಿದ್ದು, ಬುಧವಾರ ಬೆಳಗ್ಗೆ 8.30ಕ್ಕೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಶುಭಾಶಯ ಕೋರಿದ್ದಾರೆ. 2019ರ ಜ.21ರಂದು ಶ್ರೀಗಳು ಲಿಂಗೈಕ್ಯರಾಗಿದ್ದು, ಆ ಸಂದರ್ಭ ಶ್ರೀಮಠಕ್ಕೆ ಮೋದಿ ಆಗಮಿಸಿರಲಿಲ್ಲ. ಈ ವರ್ಷ ಜ.2ರಂದು ಮಠಕ್ಕೆ ಭೇಟಿ ನೀಡಿದ್ದ ಅವರು, ಶ್ರೀಗಳ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net