ಪ್ರಧಾನಿ ಮೋದಿ ನಮಗೆಲ್ಲರಿಗೂ ಸ್ಫೂರ್ತಿ : ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಹೇಳಿಕೆ

IMG-20220917-WA0012
ವಿಜಯಪುರ ನಗರದ ಗ್ಯಾಂಗ್‌ಬಾವಡಿ ಸಮೀಪದ ಯಂತ್ರೋಧಾರ ಹನುಮಾನ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ವತಿಯಿಂದ ಶನಿವಾರ ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೂಟ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಜೋಗೂರ, ಶಿವರುದ್ರ ಬಾಗಲಕೋಟ, ಕೃಷ್ಣಾ ಗುನ್ಹಾಳಕರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಇತರರಿದ್ದರು.
Published on

ವಿಜಯಪುರ : ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಹಾಗೂ ಅವರು ನಡೆದುಕೊಂಡು ಬಂದ ದಾರಿ ನಮಗೆಲ್ಲರಿಗೂ ಸ್ಫ್ಪೂರ್ತಿ ಮತ್ತು ಪ್ರೇರಣೆಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಹೇಳಿದರು.

ನಗರದ ಗ್ಯಾಂಗ್‌ಬಾವಡಿ ಸಮೀಪದ ಯಂತ್ರೋಧಾರ ಹನುಮಾನ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ವತಿಯಿಂದ ಶನಿವಾರ ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮೋದಿ ಅವರು ಪ್ರಧಾನಿಯಾಗಿ ಎಂಟು ವರ್ಷಗಳಾಗಿದ್ದು, ದೇಶದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳು ಪ್ರಗತಿಯಲ್ಲಿವೆ. ದೇಶದಲ್ಲಿ ಅನೇಕ ಬದಲಾವಣೆಗಳಾಗುತ್ತಿದ್ದು, ಇಡೀ ವಿಶ್ವವನ್ನೇ ಗಮನ ಸೆಳೆದಿದೆ. ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವವನ್ನು ಮೋದಿ ಅವರು ಪಾಲನೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಮಳುಗೌಡ ಪಾಟೀಲ ಮಾತನಾಡಿ, ಮೋದಿ ಅವರ ಕಾರ್ಯ ವೈಖರಿಯಿಂದ ಪ್ರಪಂಚವೇ ದೇಶದ ಕಡೆ ಗಮನ ಹರಿಸುತ್ತಿದೆ. ಜತೆಗೆ ದೀನ ದಯಾಳ್ ಉಪಾಧ್ಯಾಯ ಹಾಗೂ ಮಹಾತ್ಮ ಗಾಂಧಿ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮೋದಿ ಅವರು ಆಡಳಿತ ಅವಧಿಯಲ್ಲಿ ಉತ್ತಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಕೇಂದ್ರದ ಯೋಜನೆಗಳ ಮೂಲಕ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನರ ಮನೆಗೆ ತಲುಪಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಅವರು ಮಾತನಾಡಿದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೂಟ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಜೋಗೂರ, ಶಿವರುದ್ರ ಬಾಗಲಕೋಟ, ಕೃಷ್ಣಾ ಗುನ್ಹಾಳಕರ, ಬಸವರಾಜ ಬೈಚಬಾಳ, ಸತೀಶ ಪಾಟೀಲ, ಛಾಯಾ ಮಶನ್ನವರ, ಮಲ್ಲಮ್ಮ ಜೋಗೂರ, ಭಾರತಿ ಭುಯ್ಯಾರ, ಉಮೇಶ ಕಾರಜೋಳ, ರವಿಕಾಂತ ಬಗಲಿ, ಭೀಮಾಶಂಕರ ಹದನೂರ, ಸುರೇಶ ಬಿರಾದಾರ, ಡಾ.ಬಾಬು ರಾಜೇಂದ್ರ ನಾಯಕ ಮುಂತಾದವರು ಇದ್ದರು. ಇದೇ ವೇಳೆ 50ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net