ಪ್ರಧಾನಿ ಮೋದಿ ರಾಜೀನಾಮೆ ಕೊಡಲಿ

santosh laad
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎನ್ನುವುದಾದರೆ ಚುನಾವಣೆ ಬಾಂಡ್ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲು ರಾಜೀನಾಮೆ ಕೊಡಲಿ ಎಂದು ಕಾರ್ವಿುಕ ಸಚಿವ ಸಂತೋಷ ಲಾಡ್ ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಾಂಡ್ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ನೀವು ರಾಜೀನಾಮೆ ಕೊಡ್ತೀರಾ ಮೋದಿ ಅವರೇ? ಎಂದು ಪ್ರಶ್ನಿಸಿದರು.

ಅಹಿಂದ ನಾಯಕನನ್ನು ತುಳಿಯಲು ಬಿಜೆಪಿ ಕುತಂತ್ರ ನಡೆಸಿದೆ. ರಾಜ್ಯಪಾಲರನ್ನು ಬಳಸಿಕೊಂಡು ಸಿದ್ದರಾಮಯ್ಯ ಅವರ ಹೆಸರನ್ನು ಹಾಳು ಮಾಡಲು ಹೊರಟಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರವನ್ನು ಕೆಡವಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ಮೋದಿ ಅವರು ಈ ಹಿಂದೆ ಗುಜರಾತ್​ನಲ್ಲಿ ಇದೇ ರೀತಿ ನಿವೇಶನ ತೆಗೆದುಕೊಂಡಿದ್ದಾರೆ. ಬಳಿಕ ವಾಪಸ್ ಕೊಟ್ಟಿರುವುದು ಬೇರೆ ವಿಚಾರ. ಮುಡಾ ನಿವೇಶನ ಹಂಚಿಕೆ ಮಾಡಿದ್ದು ಬಿಜೆಪಿಯವರು. ನಾವು ಕಾನೂನು ಬಾಹಿರವಾಗಿ ನಿವೇಶನ ಕೊಟ್ಟಿದ್ದೇವೆ ಅಂತ ಬಿಜೆಪಿಯವರು ಹೇಳಲಿ. ಇದೇ ರೀತಿ ಕೊಟ್ಟಿರುವ 125 ನಿವೇಶನಗಳು ಕೂಡ ಕಾನೂನು ಬಾಹಿರವೇ ಎಂದು ಪ್ರಶ್ನಿಸಿದರು.

ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ವಿರುದ್ಧ ಬಿಜೆಪಿಯವರು ಪಿತೂರಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net