ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಶೀಘ್ರ ಮುಕ್ತಿ; ಪಿಎಂ ಮೋದಿ

ಸದ್ಸದ್ಸದ್ಸದ್
Published on

ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಸಮಾವೇಶದಲ್ಲಿ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ದೇಶಕ್ಕೆ ಬೆಂಗಳೂರು ಅಂದ್ರೆ ಭಾವನಾತ್ಮಕ ಸಂಬಂಧವಿದೆ. ಬೆಂಗಳೂರು ಯುವಕರ ಸ್ವಪ್ನ ನಗರ. ಆದರೆ ಈ ನಗರದಲ್ಲಿ ಟ್ರಾಫಿಕ್ ಸಮಸ್ಯೆ ವಿಪರೀತವಾಗಿದೆ. ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಅಗತ್ಯ ಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ಟ್ರಾಫಿಕ್ ಸಮಸ್ಯೆಯಿಂದ ಬೆಂಗಳೂರಿನ ಜನ ಮುಕ್ತಿ ಪಡೆಯಲು ಹಲವಾರು ಯೋಜನೆ ರೂಪಿಸಲಾಗಿದೆ. ನೂತನ ಮೆಟ್ರೋ, ರೈಲು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈ ಯೋಜನೆಗಳು ಟ್ರಾಫಿಕ್ ಸಮಸ್ಯೆಯಿಂದ ಹೊರಬರಲು ಸಹಕಾರಿಯಾಗಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net