ಎಸ್​ಪಿಜಿ ಸಲಹೆಯಂತೆ ಪ್ರಧಾನಿ ಮೋದಿ ಕಾರ್ಯಕ್ರಮದ ರೂಪುರೇಷೆ: ಸಿಎಂ ಬೊಮ್ಮಾಯಿ‌ ಹೇಳಿಕೆ

Basavaraja Bommai
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ವಿಶೇಷ ಭದ್ರತಾ ಪಡೆ ಸಲಹೆಯಂತೆ ಪ್ರಧಾನಿ ನರೇಂದ್ರ ಮೋದಿಯವರ ಮಾ.12ರ ಕಾರ್ಯಕ್ರಮದ ರೂಪುರೇಷೆ ಅಂತಿಮವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು ರೋಡ್ ಶೋ ರದ್ದು ಅಥವಾ ಇದೇ ಎಂದು ಈಗಲೇ ಹೇಳಲಾಗದು. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಬಹೈವೇ ಲೋಕಾರ್ಪಣೆಯಾಗಲಿದೆ. ಎಸ್ ಪಿಜಿಯವರು ಸ್ಥಳ ಪರಿಶೀಲಿಸಿ ನೀಡುವ ಸೂಚನೆಯಂತೆ ಕಾರ್ಯಕ್ರಮ ರೂಪುಗೊಳ್ಳಲಿದೆ ಎಂದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲಿದೆ. ಈ ವಿಷಯದಲ್ಲಿ ಪೂರ್ಣ ಅಧಿಕಾರ ನೀಡಿದ್ದು, ಯಾವುದೇ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ ಎಂದು ಸಿಎಂ ಬೊಮ್ಮಾಯಿ‌ ಸ್ಪಷ್ಟಪಡಿಸಿದರು.

ಕ್ರೆಡಿಟ್​ ವಾರ್​

ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು – ಬೆಂಗಳೂರು ನಡುವಿನ ದಶಪಥ ಹೆದ್ದಾರಿಯನ್ನು ಮಾರ್ಚ್.9ರಂದು ಪರಿಶೀಲನೆ ನಡೆಸಲು ಮುಂದಾಗಿದ್ದು, ಈ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ರಸ್ತೆ ನಿರ್ಮಾಣದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗು ಬಿಜೆಪಿ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಹೇಳಿದ್ದಾರೆ. ಸಂಸದ ಪ್ರತಾಪ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲ ಕಿ.ಮೀ ಮಾತ್ರ ಸೇರುತ್ತದೆ. ಹೀಗಿದ್ದರೂ ಈ ರಸ್ತೆ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಈ ಬಗ್ಗೆ ಎಲ್ಲಾ ಮಾಹಿತಿ ಇದೆ. ಅವರೇ ಮುಂದೆ ನಿಂತು ಹೆದ್ದಾರಿ ನಿರ್ಮಿಸಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net