ಪಿಎಂ ಸ್ವನಿಧಿ ಯೋಜನೆಗೆ ಕೇವಲ 21 ಸಾವಿರ ಅರ್ಜಿ : 1,554 ಬೀದಿಬದಿ ವ್ಯಾಪಾರಿಗಳಿಗೆ ಸಾಲ

Street Venders
Published on

ಬೆಂಗಳೂರು : ಬೀದಿಬದಿ ವ್ಯಾಪಾರಿಗಳ ಉದ್ಯಮ ಪ್ರೋತ್ಸಾಹಕ್ಕೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಸಾಲಸೌಲಭ್ಯ ಸಿಕ್ಕಿದೆ. ಆದರೆ ಮಾಹಿತಿ ಮತ್ತು ಜಾಗೃತಿ ಕೊರತೆಯಿಂದಾಗಿ ಪಾಲಿಕೆಗೆ ಕೇವಲ 21 ಸಾವಿರ ಅರ್ಜಿ ಸಲ್ಲಿಕೆಯಾಗಿದ್ದು, 1,554 ಜನರು ಮಾತ್ರ ಲಾಭ ಪಡೆದುಕೊಂಡಿದ್ದಾರೆ.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿದ್ದ ಬೀದಿಬದಿ ವ್ಯಾಪಾರಿಗಳು ಜೀವನ ಸಾಗಿಸಲ್ಲಿಕ್ಕೂ ತೊಂದರೆಯಾಗಿತ್ತು. ಹೀಗಾಗಿ, ಸಣ್ಣ ಪ್ರಮಾಣದ ಬಂಡವಾಳ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆತ್ಮನಿರ್ಭರ ನಿಧಿಯನ್ನು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಮೂಲಕ ತಲಾ 10 ಸಾವಿರ ರೂ. ಸಾಲ ಪಡೆಯಬಹುದಿತ್ತು. ಈ ಕುರಿತು ಜೂನ್‌ನಿಂದ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ನಗರದಲ್ಲಿ ಸುಮಾರು 80 ಸಾವಿರಕ್ಕೂ ಅಧಿಕ ಬೀದಿ ಬದಿವ್ಯಾಪಾರಿಗಳಿದ್ದರೂ ಕೇವಲ 21,004 ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಉಳಿದ ಶೇ.60 ಮಂದಿ ಅರ್ಜಿ ಸಲ್ಲಿಕೆ ಮಾಡಿಲ್ಲ. 5,579 ಅರ್ಜಿಗಳಿಗೆ ಸಾಲ ನೀಡಲು ಅನುಮೋದನೆ ಸಿಕ್ಕಿದ್ದು, ಇದರಲ್ಲಿ 1,554 ಬೀದಿ ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಸಾಲದ ಮೊತ್ತವನ್ನು ಆನ್‌ಲೈನ್ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಜಾಗೃತಿ ಕೊರತೆ: ಪಾಲಿಕೆ ವ್ಯಾಪ್ತಿಯಲ್ಲಿ ನ.14ರ ಒಳಗಾಗಿ ಕನಿಷ್ಠ 25 ಸಾವಿರ ಬೀದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿಗೆ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಕಾರ್ಯದರ್ಶಿಗಳು ಬಿಬಿಎಂಪಿಗೆ ಸೂಚಿಸಿದ್ದರು. ಇದಕ್ಕಾಗಿ ಬೆಂಗಳೂರು ಒನ್ ಮತ್ತು ವಾರ್ಡ್ ಕಚೇರಿಗಳಲ್ಲಿ ವಿಶೇಷ ಸಹಾಯ ಕೇಂದ್ರ ಆರಂಭಿಸಲು ನಿರ್ದೇಶನ ನೀಡಲಾಗಿತ್ತು. ಆದರೆ, ಪಾಲಿಕೆಯಿಂದ ಬೀದಿ ವ್ಯಾಪಾರಿಗಳಿಗೆ ಜಾಗೃತಿ ಮೂಡಿಸಲು ನಿರ್ಲಕ್ಷ್ಯ ವಹಿಸಿದ್ದು, ಸರ್ಕಾರ ನೀಡಿದ್ದ ಗುರಿ ತಲುಪಲೂ ವಿಲವಾಗಿದೆ. ಮಾಹಿತಿ ಕೊರತೆಯಿಂದ ವ್ಯಾಪಾರಿಗಳು ಹೆಚ್ಚಿನ ಬಡ್ಡಿಗೆ ಸಾಲ ಪಡೆದುಕೊಳ್ಳುತ್ತಿದ್ದಾರೆ.

ಆನ್‌ಲೈನ್ ಅರ್ಜಿ ಸಲ್ಲಿಕೆ ಕಷ್ಟ : ಸ್ಮಾರ್ಟ್‌ೆನ್ ಇಲ್ಲದ ಬಹುಪಾಲು ವ್ಯಾಪಾರಿಗಳಿಗೆ ಸಾಲಸೌಲಭ್ಯ ಕೈಗೆಟುಕಿಲ್ಲ. ಹೀಗಾಗಿ, ಅರ್ಜಿ ಸಲ್ಲಿಕೆ ವಿಧಾನವನ್ನು ಸರಳೀಕರಣ ಮಾಡಬೇಕು. ಜತೆಗೆ, ಸಾಲದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ವಾರದೊಳಗೆ ಸಾಲ ದೊರೆಯುವಂತೆ ಮಾಡಬೇಕು ಎಂದು ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಬಾಬು ಮನವಿ ಮಾಡಿದ್ದಾರೆ.

ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? :  ಕೇಂದ್ರ ಸರ್ಕಾರದ ಡಿಡಿಡಿ.ಞಚ್ಞಜಿಜಿ.ಞಟಜ್ಠ.ಜಟ.ಜ್ಞಿವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಮೊಬೈಲ್ ಸಂಖ್ಯೆ ಮತ್ತು ಕ್ಯಾಪ್ಚಾರ್ ಕೋಡ್ ನಮೂಸಿ ವ್ಯಾಪಾರದ ವರ್ಗ ಮತ್ತು ಅಗತ್ಯವಿರುವ ಬ್ಯಾಂಕ್ ಮತ್ತು ವಿಳಾಸದ ವಿವರವನ್ನು ಭರ್ತಿ ಮಾಡಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net