

ವಿಟ್ಲ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಜ್ ಯೋಜನೆಯ (ನಗರ) ೨.೦ ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಸರ್ವೇ ಕಾರ್ಯಕ್ಕೆ ಮುಂದಾಗಿದ್ದು, ಸಾರ್ವಜನಿಕ ಮಾಹಿತಿ ಪತ್ರವನ್ನು ಪ.ಪಂ. ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಬಿಡುಗಡೆ ಮಾಡಿದರು.
ಮುಂದಿನ ೫ ವರ್ಷದಲ್ಲಿ ದೇಶ ನಗರ ಪ್ರದೇಶದಲ್ಲಿ ಬಡವರು, ಕೊಳಚೆ ನಿವಾಸಿಗಳನ್ನು ಸೇರಿ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ವಾಸಿಸುವ ನಿವೇಶನ ರಹಿತರು ಮತ್ತು ವಸತಿ ರಹಿತ ಕುಟುಂಬಗಳನ್ನು ಗುರುತಿಸುವ ರ್‍ಯಾಪಿಡ್ ಬೇಡಿಕೆ ಸಮೀಕ್ಷೆ ನಡೆಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಆನ್‌ಲೈನ್ ವ್ಯವಸ್ಥೆಯನ್ನು ಮಾಡಿದ್ದು ಆ.೩೦ ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸುವವರಿಗೆ ವಿವಿಧ ಷರತ್ತುಗಳನ್ನು ವಿಽಸಲಾಗಿದೆ. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿಯ ಬಡತನ ನಿವಾರಣಾ ಶಾಖೆಯನ್ನು ಸಂಪರ್ಕಿಸಬಹುದಾಗಿದೆ. ಸ್ಥಾಯೀ ಸಮಿತಿ ಅಧ್ಯಕ್ಷ ರವಿಪ್ರಕಾಶ್, ಮುಖ್ಯಾಧಿಕಾರಿ ಕರುಣಾಕರ ವಿ., ಸಮುದಾಯ ಸಂಘಟನಾಧಿಕಾರಿ ಶ್ರೀಶೈಲ ಸಂಕನಗೌಡ ಮತ್ತಿತರರಿದ್ದರು.