

ಮಡಿಕೇರಿ:
ಇಲ್ಲಿಯ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಗುರುವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಮನೆಗೊಂದು ಮರ, ಊರಿಗೊಂದು ವನ ಘೋಷ ವಾಕ್ಯದಡಿ ನಡೆದ ಕಾರ್ಯಕ್ರಮದಲ್ಲಿ ಡಿಡಿಪಿಐ ಕಚೇರಿಯ ಸೌಮ್ಯಾ ಪೊನ್ನಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮ ನಡೆಸಿಕೊಟ್ಟರು.
ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ವೇಳೆ ಪರಿಸರ ಜಾಗೃತಿಯ ಘೋಷಣೆಗಳನ್ನು ಕೂಗಲಾಯಿತು. ನಂತರ ಶಾಲಾ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಹೆಚ್.ಕೆ. ಸುಶೀಲಾ, ಶಿಕ್ಷಕರು ಈ ಸಂದರ್ಭ ಇದ್ದರು.