

ಬೆಳಗಾವಿ: ರಾಜ್ಯದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಎಸ್‌ಸಿ, ಎಸ್‌ಟಿ ಸಮುದಾಯದ ಹೆಣ್ಣು ಮಕ್ಕಳನ್ನು ಪ್ರೀತಿ ಪ್ರೇಮದ ಹೆಸರಿನಲ್ಲಿ ಲವ್ ಜಿಹಾದ್‌ಗೆ ಅವ್ಯಾಹತವಾಗಿ ನಡೆಯುತ್ತಿದ ಎಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ವಾಗ್ದಾಳಿ ನಡೆಸಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಲವ್ ಜಿಹಾದ್ ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಪರೋಕ್ಷವಾಗಿ ಲವ್ ಜಿಹಾದ್‌ಗೆ ಬೆಂಬಲಿಸುತ್ತಿದೆ. ಪರಿಣಾಮ ಬಡ, ಕೂಲಿ ಕಾರ್ಮಿಕರ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿಯಾಗುತ್ತಿದ್ದಾರೆ. ಮಹಿಳೆಯರ ರಕ್ಷಣೆ ಮಾಡುವಲ್ಲಿ ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಲವ್ ಜಿಹಾದ್‌ಗೆ ತುತ್ತಾಗಿದ್ದ ಮೂವರು ಪೊಲೀಸ್ ಅಧಿಕಾರಿಗಳ ಹೆಣ್ಣು ಮಕ್ಕಳನ್ನು ಶ್ರೀರಾಮ ಸೇನೆ ಸಂಘಟನೆ ರಕ್ಷಣೆ ಮಾಡಿದೆ. ಪೊಲೀಸ್ ಅಧಿಕಾರಿಗಳು ಕೂಡ ಶ್ರೀರಾಮಸೇನಾ ಸಹಾಯವಾಣಿಗೆ ಕರೆ ಮಾಡಿ ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡುವಂತೆ ವಿನಂತಿಸುತ್ತಿದ್ದಾರೆ. ಲವ್ ಜಿಹಾದಿಗಳಿಗೆ ಭಯ ಇಲ್ಲದಂತಾಗಿದ್ದು, ಹಿಂದು ಮಹಿಳೆಯರನ್ನು ಗುರಿ ಮಾಡಿಕೊಂಡು ಕೃತ್ಯ ನಡೆಸುತ್ತಿದ್ದಾರೆ. ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ಕುರಿತು ದೊಡ್ಡ ಚರ್ಚೆಗಳು ಆಗುತ್ತಿವೆ. ಆದರೆ, ಅತ್ಯಾಚಾರಿಗಳಿಗೆ ಶಿಕ್ಷೆ ಆಗುತ್ತಿಲ್ಲ. ಈ ನ್ಯಾಯಾಲಯದ ವ್ಯವಸ್ಥೆಗೆ ಧಿಕ್ಕಾರ ಹೇಳುತ್ತೇನೆ ಎಂದರು.
ರಾಜ್ಯದಲ್ಲಿ ಲವ್ ಜಿಹಾದ್ ಬಗ್ಗೆ ತಿಳಿಸಲು ಪುಸ್ತಕ ಬಿಡುಗಡೆ ಜನರಿಗೆ ನೀಡಲಾಗಿತ್ತು. 2009ರಲ್ಲಿ ಮುದ್ರಣ ಮಾಡಿ ಪುಸ್ತಕವನ್ನು ಮರುಮುದ್ರಣ ಮಾಡಿ ಎಲ್ಲರಿಗೂ ನೀಡಲಾಗುತ್ತಿದೆ. ಹಿಂದು ಮಹಿಳೆಯರು ಲವ್ ಜಿಹಾದ್ ಬಗ್ಗೆ ಜಾಗೃತಿ ವಹಿಸಬೇಕು. ಶ್ರೀರಾಮಸೇನೆ ಲವ್ ಜಿಹಾದ್ ವಿರುದ್ಧ ಉಗ್ರ ಹೋರಾಟ ನಡೆಸಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.
ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿ,ಕಳೆದ 20 ವರ್ಷಗಳಿಂದ ಲವ್ ಜೀಹಾದ್ ಕುರಿತು ಹೋರಾಟ ಮಾಡಿಕೊಂಡು ಬರುತ್ತಿದೆ. ಲವ್ ಜೀಹಾದ ಬಗ್ಗೆ ಮೊದಲು ಅಪಹಾಸ್ಯ ಮಾಡಿದ್ದರು. ಈಗ ಇಡೀ ದೇಶವೇ ಲವ ಜೀಹಾದ ವಿರುದ್ಧ ಚರ್ಚೆ ಮಾಡುತ್ತಿದ್ದಾರೆ.ಕಳೆದ ವರ್ಷ ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಆವರಣದಲ್ಲಿ ನೇಹಾ ಹಿರೇಮಠ ಲವ್ ಜೀಹಾದ್ ಒಪ್ಪದ ಹಿನ್ನೆಲೆಯಲ್ಲಿ ಭೀಕರವಾಗಿ ಹತ್ಯೆಯಾದಳು. ಇದನ್ನು ಗಂಭೀರವಾಗಿ ಪರಿಹಣಿಸಿ ರಾಜ್ಯಾದ್ಯಂತ ಸಹಾಯವಾಣಿ ಆರಂಭಿಸಿದ್ದೇವು ಎಂದರು.
ಮಹಿಳೆಯರಿಗೆ, ಸಹೋದರಿಯರಿಗೆ ಲವ್ ಜಿಹಾದ್ ವಿರುದ್ಧ ಹೋರಾಡಲು ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಿದ್ದೇವು. ಹಿಂದು ಮಹಿಳೆಯರು ಲವ್ ಜೀಹಾದ್ ವಿರುದ್ಧ ಹೋರಾಟ ನಡೆಸಲು ಶ್ರೀರಾಮ ಸೇನೆ ತರಬೇತಿಯನ್ನು ನೀಡಲಾಗುತ್ತಿದೆ. ಕೆಲ ಭಾಗದಲ್ಲಿ ಮುಸ್ಲಿಂ ಸಮುದಾಯವರು ಲವ್ ಜಿಹಾದ್ ಹಿಂದು ವೇಷಭೋಷಣ ಹಾಕಿಕೊಂಡು ಓಡಾಡುತ್ತಿದ್ದಾರೆ. ತಮ್ಮ ವ್ಯಾಪಾರ ಮಳಿಗಳಿಗೆ ಹಿಂದೂ ದೇವತೆ, ಹಿಂದೂ ಹೆಸರುಗಳನ್ನು ಇಟ್ಟುಕೊಳ್ಳುತ್ತಿದ್ದಾರೆ. ಹಾಗಾಗಿ ಜನರು ಎಚ್ಚರಿಕೆಯಿರಬೇಕು ಎಂದು ಹೇಳಿದರು.
ರವಿ ಕೋಕಿತ್ಕರ್, ಮಾಧುಶ್ರೀ, ಸುಂದ್ರೇಶ ಇತರರಿದ್ದರು.