ಸುಶಿಕ್ಷಿತರ ಜಿಲ್ಲೆಯಲ್ಲೂ ಪೋಕ್ಸೋ ಹೆಚ್ಚಳ

pocso
Published on

ಮಡಿಕೇರಿ:

ಸಾಂಸ್ಕೃತಿಕ ಶ್ರೀಮಂತಿಕೆಯ ಸುಶಿಕ್ಷಿತರ ಜಿಲ್ಲೆ ಹೆಗ್ಗಳಿಕೆಯ ಕೊಡಗಿನಲ್ಲೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ 335 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳು ಸಾಕ್ಷಾö್ಯಧಾರ ಕೊರತೆಯಿಂದಾಗಿ ಶಿಕ್ಷೆಯಿಂದ ತಪ್ಪಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಶಾಲಾ ಹಂತದಲ್ಲಿ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ಮಕ್ಕಳಿಗೆ ಅರಿವು ಸೇರಿದಂತೆ ಸೂಕ್ತ ಶಿಕ್ಷಣದ ಅರಿವಿನ ಅಗತ್ಯತೆ ಬಗ್ಗೆ ಮಾತುಗಳು ಕೇಳಿಬರುತ್ತಿದೆ.

ಬಿಗಿಯಾದ ಕಾನೂನು, ಜಾಗೃತಿ ಕಾರ್ಯಕ್ರಮಗಳು, ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸುವ ಶಿಬಿರಗಳು ಆಗಾಗ್ಗೆ ನಡೆಯುತ್ತಿದ್ದರೂ ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಮಾತ್ರ ಏರುತ್ತಲೇ ಇದೆ. ಮತ್ತೊಂದು ಕಡೆ ಸಮಾಜದಲ್ಲಿ ಹೆಚ್ಚುತ್ತಿರುವ ಜಾಗೃತಿ ಕಾರ್ಯಕ್ರಮಗಳಿಂದಾಗಿ ದೂರು ನೀಡುವ ಪ್ರವೃತ್ತಿ ಬೆಳೆಯುವುದಕ್ಕೂ ಕಾರಣವಾಗಿದ್ದು, ಮುಚ್ಚಿಹೋಗಬಹುದಾಗಿದ್ದ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುವಂತೆಯೂ ಆಗಿದೆ.

18 ವರ್ಷದೊಳಗಿನ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು, ಮಾನಸಿಕ ಮತ್ತು ದೈಹಿಕ ಕಿರುಕುಳ, ಅತ್ಯಾಚಾರಗಳಂಥ ದುರ್ಘಟನೆಗಳನ್ನು ತಡೆಗಟ್ಟಿ ಮಕ್ಕಳಿಗೆ ರಕ್ಷಣೆ, ಭದ್ರತೆ ಹಾಗೂ ನ್ಯಾಯ ಒದಗಿಸುವ ಉದ್ದೇಶದಿಂದ ಪೋಕ್ಸೋ ಕಾಯಿದೆ-2012 ಜಾರಿಗೆ ತರಲಾಗಿದೆ. 18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದು ಕಂಡುಬAದರೆ ಅಂಥÀವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (ಪೋಕ್ಸೋ) ಪ್ರಕರಣ ದಾಖಲಾಗುತ್ತದೆ.

ಹೆಚ್ಚಾಗುತ್ತಿರುವ ಪೋಕ್ಸೋ ಪ್ರಕರಣಗಳು ಸುಶಿಕ್ಷಿತ ಸಮಾಜದ ವೈಫಲ್ಯದ ಲಕ್ಷಣ ಎಂದು ವ್ಯಾಖ್ಯಾನಿಸಲಾಗುತ್ತಿದ್ದರೂ ಈ ಮೂಲಕ ಸಂತ್ರಸ್ತರಿಗೆ ನ್ಯಾಯ ಮತ್ತು ರಕ್ಷಣೆ ಒದಗಿಸುವ ಅವಕಾಶವೂ ಸಿಕ್ಕಂತಾಗಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ 12,935 ಪೋಕ್ಸೋ ಪ್ರಕರಣಗಳು ದಾಖಲಾಗಿದೆ. ಈ ಪೈಕಿ ಪುಟ್ಟ ಜಿಲ್ಲೆ ಕೊಡಗಿನಲ್ಲಿ 335 ಪ್ರಕರಣಗಳು ವರದಿಯಾಗಿದೆ.

2021-22ನೇ ಸಾಲಿನಲ್ಲಿ ಕೊಡಗಿನಲ್ಲಿ 74 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದವು. 2022-23ರಲ್ಲಿ ಜಿಲ್ಲೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಗಳ ಸಂಖ್ಯೆ 64. 2023-24ರಲ್ಲಿ 76 ಪೋಕ್ಸೋ ಪ್ರಕರಣಗಳು ಕೊಡಗಿನಲ್ಲಿ ಕಂಡು ಬಂದಿದ್ದರೆ, 2024-25ರಲ್ಲಿ ಅತೀ ಹೆಚ್ವು ಅಂದರೆ 95 ಪೋಕ್ಸೋ ಪ್ರಕರಣಗಳು ದಾಖಲಾಗಿದೆ. 2025-26ನೇ ಸಾಲಿನಲ್ಲಿ ಏಪ್ರಿಲ್‌ನಿಂದ ಜೂನ್ ತನಕ 26 ಪೋಕ್ಸೋ ಪ್ರಕರಣಗಳು ಜಿಲ್ಲೆಯಲ್ಲಿ ವರದಿ ಆಗಿದೆ.

ಇತ್ತೀಚಿನ ವರ್ಷಗಳಲ್ಲಿ ಪೋಕ್ಸೋ ಕಾಯ್ದೆ ಕುರಿತು ನಿರಂತರ ಜಾಗೃತಿ ಮೂಡಿಸುತ್ತಿರುವ ಕಾರಣದಿಂದ ಪೋಕ್ಸೋ ಪ್ರಕರಣಗಳು ದಾಖಲಾಗುವ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಬಹುತೇಕ ಪೋಕ್ಸೋ ಪ್ರಕರಣಗಳು ಪ್ರೇಮ ಪ್ರಕರಣಗಳಿಂದಾಗಿ ದಾಖಲಾಗುತ್ತಿದೆ ಎನ್ನುತ್ತದೆ ಸರ್ಕಾರ. ಆದರೆ ಪೋಕ್ಸೋ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದರೂ ದುಷ್ಕರ್ಮಿಗಳ ವಿರುದ್ಧ ಆರೋಪ ಸಾಬೀತಾಗಿ ಶಿಕ್ಷೆ ಆಗುವ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ ಇದೆ. ಈ ನಿಟ್ಟಿನಲ್ಲೂ ಜಾಗೃತಿ ಮೂಡಿಸುವ ಅಗತ್ಯ ಇದೆ ಎನ್ನುತ್ತಾರೆ ತಜ್ಞರು.

ಹೆಚ್ಚಿನ ಪ್ರಕರಣಗಳಲ್ಲಿ ಮಕ್ಕಳ ಭವಿಷ್ಯದ ದೃಷ್ಠಿಯಿಂದ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಮುಂದುವರೆಸದೆ ಹಿಂಜರಿಯುವ ಪೋಷಕರು ಇದ್ದಾರೆ. ಇನ್ನು ಕೆಲವು ಪ್ರಕರಣಗಳಲ್ಲಿ ತಮ್ಮ ಘನತೆಗೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎನ್ನುವ ಕಾರಣಕ್ಕೆ ಪೋಷಕರು ಅಥವಾ ಸಂತ್ರಸ್ತರ ಕುಟುಂಬಸ್ಥರು ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವುದೂ ಇದೆ. ನ್ಯಾಯಾಲಯದ ಹೊರಗೆ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುತ್ತಿರುವುದರಿಂದಲೂ ಆರೋಪಿಗಳಿಗೆ ಶಿಕ್ಷೆ ಆಗದೆ ಖುಲಾಸೆ ಆಗುವ ಪ್ರಸಂಗಗಳು ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ.

ಕೊಡಗಿನಲ್ಲಿ ಬುಡಕಟ್ಟು ಹಾಡಿಗಳಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗಿ ವರದಿ ಆಗುತ್ತಿರುವುದು ಕಳವಳಕಾರಿಯಾಗಿದೆ. ಅಲ್ಲಲ್ಲಿ ಕಾಫಿ ತೋಟಗಳ ಮಾಲೀಕರು, ತೋಟದ ಉಸ್ತುವಾರಿಗಳಿಂದಲೂ ತಮ್ಮಲ್ಲಿ ಕೆಲಸ ಮಾಡುವ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಕ್ಕೆ ಸಂಬAಧಿಸಿದAತೆ ಪ್ರಕರಣಗಳು ದಾಖಲಾಗಿದೆ. ಹೊರ ರಾಜ್ಯಗಳ ಕಾರ್ಮಿಕರೂ ಇಂಥ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಘಟನೆಗಳೂ ಜಿಲ್ಲೆಯಲ್ಲಿ ವರದಿ ಆಗಿದೆ. ಇಲ್ಲಿ ನಡೆಯುವ ಇಂಥ ಘಟನೆಗಳು ಸುಶಿಕ್ಷಿತರ ಜಿಲ್ಲೆ ಕೊಡಗಿಗೆ ಕಪ್ಪು ಚುಕ್ಕಿಯಾಗಿದೆ ಎನ್ನುತ್ತಾರೆ ಪ್ರಜ್ಞಾವಂತರು.

ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ಮಕ್ಕಳಿಗೆ ತಿಳುವಳಿಕೆ ಮೂಡಿಸಲು ಜಾಗೃತಿ ಕಾರ್ಯಕ್ರಮಗಳು, ಶಾಲೆ, ಪಾರ್ಕ್, ಆಟದ ಮೈದಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ ಅಳವಡಿಕೆ, ಕರ್ನಾಟಕ ಸ್ಟೇಟ್ ಪೊಲೀಸ್ ಆ್ಯಪ್ ಮೂಲಕ ತುರ್ತು ಸಂದರ್ಭಗಳಲ್ಲಿ ವಿಡಿಯೋ ಕರೆ ಮಾಡಿ ದೂರು ಸಲ್ಲಿಸಲು ಅವಕಾಶ,

ಪೊಲೀಸ್ ಠಾಣೆಗಳಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುವ 1050 ಮಹಿಳಾ ಹೆಲ್ಪ್ ಡೆಸ್ಕ್ ರಚನೆ, ವಿವಿಧ ಪೊಲೀಸ್ ಠಾಣೆಗಳಲ್ಲಿ 35 ಮಾನವ ಕಳ್ಳ ಸಾಗಾಣಿಕೆ ನಿಷೇಧ ಘಟಕ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆಗೆ ಸಂಬAಧಿಸಿದAತೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಕೆಲವು ಪ್ರಕರಣಗಳಲ್ಲಿ ತಮ್ಮ ಘನತೆಗೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎನ್ನುವ ಕಾರಣಕ್ಕೆ ಪೋಷಕರು ಅಥವಾ ಸಂತ್ರಸ್ತರ ಕುಟುಂಬಸ್ಥರು ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವುದೂ ಇದೆ. ಪೋಕ್ಸೋ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಅನುಕೂಲ ಆಗುವ ನಿಟ್ಟಿನಲ್ಲಿ ಕಾನೂನು ಇಲಾಖೆ ಮೂಲಕ ಅಗತ್ಯ ಕ್ರಮಕ್ಕೂ ಸರ್ಕಾರ ಮುಂದಾಗಿದೆ.

ಲಕ್ಷಿö್ಮÃ ಆರ್. ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net