

ವಿಜಯನಗರ: ಹೊಸ ವರ್ಷದ ಆರಂಭದ ದಿನವೇ ಒಂದು ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ. ಅದೂ ಬಾಲಕನ ಮೇಲೆಯೇ ಯುವಕನೊಬ್ಬ ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ. ವಿಜಯಪುರ ಜಿಲ್ಲೆಯ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದು ವರದಿಯಾಗಿದೆ.
ಏಳು ವರ್ಷದ ಬಾಲಕನ ಮೇಲೆ 17 ವರ್ಷದವನೊಬ್ಬ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವಿಜಯನಗರ ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.