

ಮಂಗಳೂರು: ನಗರದ ಅತ್ತಾವರ ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅಮರ್ ಮತ್ತು ಸೂರಜ್ ಪ್ರಕರಣದ ಆರೋಪಿಗಳು.
ಆ.5ರಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ೆನ್-ಇನ್ ಕಾರ್ಯಕ್ರಮದಲ್ಲಿ ಆರೋಪಿಗಳ ಅಸಭ್ಯ ವರ್ತನೆ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ತಳ್ಳುವ ಗಾಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮರ್ ಮತ್ತು ಸೂರಜ್‌ನನ್ನು ಬಂಧಿಸಿದ್ದಾರೆ.
ನಗರ ಕೇಂದ್ರ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್ ಲೋಕೇಶ್ ಎ.ಸಿ. ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.