ಪೋಕ್ಸೋ ಕಾರ್ಯಾಗಾರ

POCSO-Act-1
Published on

ಚಳ್ಳಕೆರೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೆ.2ರ ಶನಿವಾರ ಬೆಳಗ್ಗೆ 10ಕ್ಕೆ ಪೋಕ್ಸೊ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶೆ ರೇಷ್ಮಾ ಕಲಕಪ್ಪ ಗೋಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ದಿವ್ಯಾಪ್ರಭು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ಎಂ.ವಿಜಯ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಸ್‌ಪಿ ಧಮೇಂದ್ರ ಕುಮಾರ್ ಮೀನಾ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಗಾಯತ್ರಿ ಎಸ್.ಕಾಟೆ ಮತ್ತಿತರರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net