ಹುಬ್ಬಳ್ಳಿ; ಇಲ್ಲಿಯ ವಿದ್ಯಾನಗರ ಕೆಎಲ್ಇ ಸಂಸ್ಥೆಯ ಶ್ರೀಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯ ಕನ್ನಡ ವಿಭಾಗ ಮತ್ತು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ಸಹಯೋಗದಲ್ಲಿ ಗಿರಿಜಾ ಸಂಗೊಳ್ಳಿ ಅವರ "ಒಡಲ ಮಿಡಿತ' ಕವನ ಸಂಕಲನದ ವಿಮರ್ಶೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡ ವಿಷಯ ಕುರಿತು ವಿಶೇಷ ಉಪನ್ಯಾಸ ಏಪ್ರಿಲ್ 2ರಂದು ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.
ಪದವಿ ಪ್ರಾಚಾರ್ಯ ಸುಮಂಗಲಾ ಪಾಟೀಲ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ. ಕೆ.ಎಸ್. ಕೌಜಲಗಿ ಮತ್ತು ಸಾಹಿತಿ ಸುನಂದಾ ಕಡಮೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಮತ್ತು ಪಿಯು ಪ್ರಾಚಾರ್ಯ ನಿರ್ಮಲಾ ಅಣ್ಣಿಗೇರಿ ಉಪಸ್ಥಿತರಿರುವರು.