

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೇಶ್ವಿ ಗ್ರಾಮದಲ್ಲಿ ನಡೆದಿದೆ.
ಬಸವರಾಜ ಕರಿಯಪ್ಪ ಕಣಗೋಟಗಿ (40) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ 7 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.