ವಿಷ ಸೇವಿಸಿದಾತ ಚಿಕಿತ್ಸೆಗೆ ಸ್ಪಂದಿಸದೆ ಸಾವು

Death Case
Published on

ಕುಂದಾಪುರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪುಟ್ಟಯ್ಯ(68) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪುಟ್ಟಯ್ಯ 2019ರಲ್ಲಿ ನರದೌರ್ಬಲ್ಯದ ಕಾಯಿಲೆಗೆ ಒಳಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಕರೊನಾ ಸಂದರ್ಭ ಕ್ವಾರಂಟೈನ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಕಾಯಿಲೆ ಗುಣವಾಗದೆ ವಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಮೇ 19ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಂದಾಪುರ ಗ್ರಾವಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net