

ಮಡಿಕೇರಿ:
ಕೊಡಗು ಜಿಲ್ಲಾ ನಿವೃತ್ತ ಪೊಲೀಸರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಮಂಗಳವಾರ (ಫೆ.18) ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ.ಕೆ. ಉತ್ತಪ್ಪ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಮೈತ್ರಿ ಪೊಲೀಸ್ ಸಭಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತು ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಎಸ್‌ಪಿ. ಕೆ. ರಾಮರಾಜನ್ ಪಾಲ್ಗೊಳ್ಳುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
80 ವರ್ಷ ದಾಟಿದ ಸಂಘದ ಸದಸ್ಯರು ಮತ್ತು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 80ಕ್ಕಿಂತಲೂ ಅಧಿಕ ಅಂಕ ಗಳಿಸಿದ ಪೊಲೀಸರ ಮಕ್ಕಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಸಂಘದಲ್ಲಿ 900 ಕ್ಕೂ ಹೆಚ್ಚು ಸದಸ್ಯರು ಇದ್ದು, ನೂತನ ಆಡಳಿತ ಮಂಡಳಿಯನ್ನು ಇದೇ ಸಂದರ್ಭದಲ್ಲಿ ರಚಿಸಲಾಗುವುದು ಎಂದು ಮಾಹಿತಿ ನೀಡಿದರು.
ಗೌರವಾಧ್ಯಕ್ಷ ಎಂ.ಎ. ಅಪ್ಪಯ್ಯ, ಜಂಟಿ ಕಾರ್ಯದರ್ಶಿ ಎಂ.ಕೆ. ಕಾವೇರಪ್ಪ, ಕಾರ್ಯದರ್ಶಿ ಅಚ್ಯುತ್ತನ್ ನಾಯರ್, ಖಜಾಂಚಿ ಬಿ.ಎಂ. ಭೀಮಯ್ಯ ಕಾರ್ಯಾಧ್ಯಕ್ಷ ಬಿ.ಆರ್. ಲಿಂಗಪ್ಪ ಸುದ್ದಿಗೋಷ್ಠಿಯಲ್ಲಿ ಇದ್ದರು.