

ಹನೂರು : ರಾಷ್ಟ್ರೀಯ ಐಕ್ಯತೆ, ಸಮಗ್ರತೆ ಹಾಗೂ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ದಕ್ಷತೆಯಿಂದ ಕಾರ್ಯನಿರ್ವಹಿಸೋಣ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಶಶಿಕುಮಾರ್ ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ರಾಷ್ಟ್ರೀಯ ಐಕ್ಯತಾ ದಿವಸ್ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು. ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದಿರುವ ಸರ್ದಾರ್ ಪಟೇಲ್ ಅವರ ಜಯಂತಿ ಅಂಗವಾಗಿ ಸರ್ಕಾರ ಈ ದಿನವನ್ನು ರಾಷ್ಟ್ರೀಯ ಐಕ್ಯತಾ ದಿನವಾಗಿ ಆಚರಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಯಾವುದೇ ಜಾತಿ, ತಾರತಮ್ಯ ತೊರೆದು ಭಾವೈಕ್ಯತೆ ಹಾಗೂ ಸೌಹಾರ್ದಕ್ಕಾಗಿ ಪ್ರಮಾಣಿಕ ಹಾಗೂ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಬ್ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್ ಪ್ರಸಾದ್, ಅಶ್ವಥ್, ಎಎಸೈ ಕೃಷ್ಣ ಹಾಗೂ ಸಿಬ್ಬಂದಿಗಳು ಇದ್ದರು.