ಮಹಿಳೆಗೆ ಕಾರು ಡಿಕ್ಕಿ ಹೊಡೆದು ಪರಾರಿ ಕಾರು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

accident-15
Published on

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಂಪ್‌ವೆಲ್ - ಎಕ್ಕೂರು ನಡುವಿನ ಗೋರಿಗುಡ್ಡ ಬಳಿ ರಸ್ತೆ ದಾಟುತ್ತಿದ್ದ ಅನುಪಮಾ (67) ಎಂಬವರಿಗೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ.

ಢಿಕ್ಕಿ ಹೊಡೆದ ಕಾರಿನ ಚಾಲಕ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಸಿಸಿ ಕೆಮರಾ ದೃಶ್ಯಾವಳಿಯ ಆಧಾರದಲ್ಲಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ನಿವಾಸಿಯಾಗಿರುವ ಅನುಪಮಾ ಅವರು ಗುರುವಾರ ಬೆಳಗ್ಗೆ 10 ಗಂಟೆ ವೇಳೆಗೆ ಗೋರಿಗುಡ್ಡೆಯ ರಿಯಾ ಟಿಂಬರ್ಸ್ ಬಳಿಯ ಸರ್ವಿಸ್ ರಸ್ತೆಯಬನ್ನು ದಾಟಿ ಜಪ್ಪಿನಮೊಗರು ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುವ ಹೆದ್ದಾರಿಯನ್ನು ದಾಟುತ್ತಿದ್ದ ಸಂದರ್ಭದಲ್ಲಿ ಜಪ್ಪಿನಮೊಗರು ಕಡೆಯಿಂದ ಬಂದ ಕಾರು ಢಿಕ್ಕಿಯಾಗಿದೆ. ಚಾಲಕ ನಿರ್ಲಕ್ಷೃದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಅನುಪಮಾ ಅವರ ತಲೆಗೆ ತೀವ್ರ ತರದ ರಕ್ತ ಗಾಯವಾಗಿದ್ದು, ಹಣೆ ಮತ್ತು ಮೂಗಿಗೆ ರಕ್ತಗಾಯ ಮತ್ತು ಬಲ ಕೈಗೆ ಗುದ್ದಿದ ಗಾಯವಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net