ಮದರಸಗೆ ಬರುತ್ತಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಉಸ್ತಾದ್​ನ ಬಂಧನ

Ustad
Published on

ಮಂಗಳೂರು: ಶಿಕ್ಷಣಕ್ಕಾಗಿ ಮದರಸಗೆ ಬರುತ್ತಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್​ನನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಂಡಡ್ಕದ ಶಂಶುಲ್ ಹುದಾ ಮದರಸದ ಉಸ್ತಾದ್ ಸಿರಾಜುದ್ದೀನ್ ಮದನಿ ಬಂಧಿತ ಆರೋಪಿ.

ಮದರಸ ಶಿಕ್ಷಣ ಪಡೆಯುತ್ತಿದ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರಿಗೆ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತು ಆ ಬಾಲಕಿಯರು ತಮ್ಮ ತಾಯಿಯಲ್ಲಿ ಹೇಳಿಕೊಂಡಿದ್ದರು. ಆಕೆ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು.

ಮಹಿಳೆ ನೀಡಿದ್ದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದ ಪುತ್ತೂರು ಮಹಿಳಾ ಠಾಣೆ ಪೊಲೀಸರು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net