ಮಹಿಳೆಯ ಕೊಲೆ; 24 ಗಂಟೆಗಳೊಳಗೆ ಸಿಕ್ಕಿಬಿದ್ದ ಆರೋಪಿ..

Mohammed
Published on

ಹುಬ್ಬಳ್ಳಿ: ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಈ ಪ್ರಕರಣ ನಡೆದಿದ್ದು, ಆರೋಪಿ ಮಹಮ್ಮದ್ ಅಲಿ ಮಕ್ಬುಲಾ ಕೋಲಕಾರ ಎಂಬಾತನನ್ನು ಬಂಧಿಸಲಾಗಿದೆ.

ಉರುವಲು ಕಟ್ಟಿಗೆ ತರಲು ಹೋಗಿದ್ದ ಲಕ್ಷ್ಮೀ ಕಳ್ಳಿಮನಿ ಎಂಬಾಕೆಯನ್ನು ಮಹಮ್ಮದ್ ಅಲಿ ಹಾಡುಹಗಲೇ ಕೊಲೆ ಮಾಡಿದ್ದ. ಬಳಿಕ ಆಕೆಯ ಮೈಮೇಲಿದ್ದ ಬಂಗಾರದ ಆಭರಣಗಳನ್ನು ದೋಚಿ ಪರಾರಿಯಾಗಿದ್ದ.

ಪ್ರಕರಣ ದಾಖಲಿಸಿಕೊಂಡ ಬಳಿಕ ಹುಬ್ಬಳ್ಳಿ ಮತ್ತು ಕುಂದಗೋಳ ಪೊಲೀಸರು ಜೊತೆಯಾಗಿ ಕಾರ್ಯಾಚರಣೆಗೆ ಇಳಿದಿದ್ದರು. ಕೋಲಾರ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಮಹಮ್ಮದ್ ಅಲಿಯನ್ನು 24 ಗಂಟೆಗಳಲ್ಲಿ ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತನಿಂದ 8 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net