

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಮಹಾರಾಷ್ಟ್ರ ಲಾತೂರಿನಲ್ಲಿ ಸೊಲ್ಲಾಪುರ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಸೊಲ್ಲಾಪುರದಿಂದ ಲಾತೂರಿಗೆ ಪರಾರಿಯಾಗಿದ್ದ ದಾನೇಶ ನರೋಣಿಯನ್ನು ಬಂಧಿಸಲಾಗಿದೆ. ಬೆಂಗಳೂರು ಸದಾಶಿವ ನಗರ ಪೊಲೀಸ್ ಠಾಣೆಗೆ ಆರೋಪಿಯನ್ನು ಕರೆದೊಯ್ದಿದ್ದಾರೆ. ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲಬುರಗಿ ಪೊಲೀಸರು ಬಂಧಿಸಿ, ಬೆಂಗಳೂರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗೂಗಲ್ನಲ್ಲಿ ಸಚಿವರ ನಂಬರ್ ತೆಗೆದುಕೊಂಡು ಕರೆ ಮಾಡಿದ್ದ ದಾನಪ್ಪ. ಪೋನ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.