ಬೈಕ್ ಸವಾರನ ಸುಲಿಗೆಗೈದ ಮಂಗಳಮುಖಿ ಸೆರೆ

mangalamukhi
Published on

ಮಂಗಳೂರು: ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರ ಸುಲಿಗೆಗೈದ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ(27) ಹೆಸರಿನ ಮಂಗಳಮುಖಿಯನ್ನು ಕದ್ರಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿ ಮೈಸೂರು ಮೂಲದವನಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದ. ಆತನಿಂದ ಸುಮಾರು 71 ಗ್ರಾಂ ತೂಕದ 3 ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೈಕ್ ಸವಾರ ಗಣೇಶ್ ಶೆಟ್ಟಿ ಎಂಬುವರು ಇತ್ತೀಚೆಗೆ ತನ್ನ ಬೈಕ್‌ನಲ್ಲಿ ನಂತೂರು ಪದವಿನಿಂದ ಬಿಎಸ್ಸೆನ್ನೆಲ್ ಎಕ್ಸ್‌ಚೇಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಅಡ್ಡ ಬಂದ ಮಂಗಳಮುಖಿ ಗಣೇಶ್ ಶೆಟ್ಟಿ ಮುಖಕ್ಕೆ ಪೆಪ್ಪರ್‌ಸ್ಪ್ರೇ ಮಾಡಿ 24 ಗ್ರಾಂ ತೂಕದ ಚಿನ್ನದ ಸರ ಸುಲಿಗೆ ಮಾಡಿದ್ದ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದಾಗ ಆರೋಪಿ ಮಂಗಳಮುಖಿಯು ಬೆಂಗಳೂರಿನಲ್ಲಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸೋಮವಾರ ಬೆಂಗಳೂರಿನಿಂದ ಆರೋಪಿಯನ್ನು ಬಂಧಿಸಿ ಮಂಗಳೂರಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net