ಪುಂಡರಿಂದ ಪೊಲೀಸರ ಮೇಲೆ ಹಲ್ಲೆ

Published on

 ರಾಮನಗರ: ಹೆದ್ದಾರಿಯಲ್ಲಿ ವೀಲಿಂಗ್ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ಪುಂಡರ ಗುಂಪೊಂದು ಹಲ್ಲೆ ಮಾಡಿದೆ ಎನ್ನಲಾಗಿದೆ.

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ಗಳಾದ ಜಯಕುಮಾರ್ ಮತ್ತು ಬಸವರಾಜ್ ಓಣಿಮನಿ ಹಲ್ಲೆಗೊಳಗಾದವರು. ಬೆಂಗಳೂರು-ಮೈಸೂರು ರಸ್ತೆಯ ಕೆಂಗಲ್ ಬಳಿ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಾ ಮತ್ತು ಅಪಾಯಕಾರಿ ವೀಲಿಂಗ್ ಮಾಡುತ್ತಿದ್ದ ಆರೋಪದ ಮೇಲೆ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಾಹನ ಮತ್ತು ಪ್ರಕರಣದಲ್ಲಿ ಭಾಗಿಯಾದವರ ಮಾಹಿತಿ ಹಿನ್ನೆಲೆಯಲ್ಲಿ ರಾಮನಗರದ ಹುಣಸನಹಳ್ಳಿ ರಸ್ತೆಯ ಸ್ಥಳಕ್ಕೆ ಹೋದ ಜಯಕುಮಾರ್ ಮತ್ತು ಬಸವರಾಜ ಓಣಿಮನಿ ಅವರನ್ನು ಆರೋಪಿ ಸ್ೈ ಖಾನ್, ಆತನ ತಂದೆ ಯೂಸ್ೂ ಖಾನ್ ಮತ್ತು ಇತರರು ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಥಳಿಸಿ, ಸರ್ಕಾರಿ ಬೈಕ್ ಕಸಿದು ಪರಾರಿಯಾಗಿದ್ದಾರೆ. ನಂತರ ಆಟೋ ಒಂದರಲ್ಲಿ ರಾಮನಗರ ಜಿಲ್ಲಾಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ಸಿಬ್ಬಂದಿ ರಾಮನಗರ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net