

ಕೆ.ಆರ್.ಪೇಟೆ: ಇಬ್ಬರು ವಿದ್ಯಾಥಿರ್ನಿಯರಿಗೆ ಲೈಂಗಿಕ ಕಿರುಕುಳ ನೀಡಿ, ಅವರ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹರಿಹರಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಬಂಧಿತ. ಲೈಂಗಿಕ ಕಿರುಕುಳ ನೀಡುತ್ತಿದ್ದ ಸಂಬಂಧ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರಿಬ್ಬರು ಕಸಬಾ ಹೋಬಳಿಯ ಶಿಕ್ಷಕ ಸಂಯೋಜಕಿ ಜಿ.ನೀಲಮಣಿ ಮತ್ತು ಶೀಳನಕೆರೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗವೇಣಿ ಅವರಿಗೆ ದೂರು ನೀಡಿದ್ದರು. ಇದನ್ನೂ ಓದಿರಿ ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ
ವಿದ್ಯಾರ್ಥಿನಿಯರ ದೂರಿನ ಬಗ್ಗೆ ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು ಅವರ ಗಮನಕ್ಕೆ ಶಿಕ್ಷಕ ಸಂಯೋಜಕಿ ಜಿ.ನೀಲಮಣಿ ಮತ್ತು ಶೀಳನಕೆರೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗವೇಣಿ ತಂದಿದ್ದರು. ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಠಾಣೆಗೆ ಬಿಇಒ ದೂರು ನೀಡಿದ್ದರು. ಪೋಕ್ಸೋ ಮತ್ತು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ.