ಬಸವಪ್ಪನ ಆಶೀರ್ವಾದ ಪಡೆದ ಪೊಲೀಸ್ ಕಮಿಷನರ್ ಭಾಸ್ಕರ್‌ರಾವ್

bhaskar rao
Published on

ಕೆ.ಎಂ.ದೊಡ್ಡಿ: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ದೇವಾಲಯಕ್ಕೆ ಶನಿವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಶನಿವಾರ ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಅವರು, ಶ್ರೀ ಕಾಲಭೈರವೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ಪ್ರಸಿದ್ಧ ಬಸವಪ್ಪನಿಂದ ಆಶೀರ್ವಾದ ಪಡೆದರು.

ದೇವಾಲಯದ ಕಾರ್ಯದರ್ಶಿ ಯಜಮಾನ್ ಶಿವಲಿಂಗೇಗೌಡ ಅವರಿಂದ ದೇವಾಲಯದ ಕುರಿತು ಮಾಹಿತಿ ಪಡೆದ ಅವರು, ದೇವಾಲಯದ ಬಸವನ ಪವಾಡಗಳ ಬಗ್ಗೆ ಆಶ್ಚರ್ಯವ್ಯಕ್ತಪಡಿಸಿದರು. ದೇವಾಲಯದ ವಾಸ್ತುಶಿಲ್ಪದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್ಪಿ ಎಂ.ಜೆ. ಪೃಥ್ವಿ, ಸರ್ಕಲ್ ಇನ್ಸ್‌ಪೆಕ್ಟರ್ ಶಿವಮಲವಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net