

ಸಾಗರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಂಧನಕ್ಕೆ ಆಗ್ರಹಿಸಿ ಡಿಎಸ್‌ಎಸ್ ಕಾರ್ಯಕರ್ತರು ಸಾಗರದಲ್ಲಿ ಪ್ರತಿಭಟನೆ ನಡೆಸಿ, ಸಾಗರ ನಗರ ಪೊಲೀಸ್ ಠಾಣೆಗೆ ದೂರು ನೀಡಿದರು.
ಕಸ್ತೂರಿ ರಂಗನ್ ವರದಿ ಜಾರಿ ಕುರಿತ ರಾಜ್ಯ ಅರಣ್ಯ ಸಚಿವರ ಹೇಳಿಕೆ ಖಂಡಿಸಿ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅನಗತ್ಯವಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಹಾಗೂ ಬಣ್ಣವನ್ನು ಪ್ರಸ್ತಾಪಿಸಿ ಅವಹೇಳನ ಮಾಡಿದ್ದಾರೆ. ದಲಿತರ ಬಗ್ಗೆ ಬಿಜೆಪಿ ಹಾಗೂ ಸಂಘ ಪರಿವಾರಕ್ಕೆ ಇರುವ ಪೂರ್ವಗ್ರಹಕ್ಕೆ ಈ ಮಾತುಗಳಿಗೆ ಸಾಕ್ಷಿಯಾಗಿವೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.