

ಗದಗ: ಪೊಲೀಸರ ಹೊಡೆತ ತಾಳಲಾರದೆ ಆರೋಪಿಗಳು ಲಾಕಪ್ ಡೆತ್ ಆದ ಪ್ರಕರಣಗಳಿವೆ. ಆದರೆ ಇಲ್ಲೊಂದು ಕಡೆ ದುರುಳರ ಉಪಟಳ ತಾಳಲಾರದೆ ಪೊಲೀಸ್ ಪೇದೆಯೇ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿದೆ.
ಗದಗ ಬಡಾವಣೆ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅರ್ಜುನ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಕಾರಣ ಬರೆದಿಟ್ಟಿದ್ದು, ದುಷ್ಕರ್ಮಿಗಳ ಕಿರುಕುಳ ತಾಳಲಾರದೆ ಅರ್ಜುನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.