

ಹುಬ್ಬಳ್ಳಿ: ಪೊಲೀಸ್ ಪೇದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಡಿಗೇರಿ ಕಾಲನಿಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಬೆಂಡಿಗೇರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗದಗ ಮೂಲದ ಮಲ್ಲಿಕಾರ್ಜುನ ರುದ್ರಾಪೂರ (26) ಮೃತ ದುರ್ದೈವಿ. ಅನಾರೋಗ್ಯ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗುತ್ತಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.