ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪೊಲೀಸ್ ಸಹಕಾರ ದಿನಾಚರಣೆ

Mbd_Excelent
Published on

ಮೂಡುಬಿದಿರೆ: ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮಗಳು, ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಹೋರಾಡಿ ಶಾಂತಿ ಸುವ್ಯವಸ್ಥೆ ಕಾಪಾಡುವುದು, ಜನರ ಮಧ್ಯೆ ಉತ್ತಮ ಬಾಂಧವ್ಯ ಬೆಳೆಸುವುದು ನಮ್ಮ ಆದ್ಯ ಕರ್ತವ್ಯ ಎಂದು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹೇಳಿದರು.

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಪೊಲೀಸ್ ಸಹಕಾರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಮುಖ್ಯಮಂತ್ರಿ ಚಿನ್ನದ ಪದಕ ಗೌರವ ಪಡೆದ ಸಂದೇಶ್ ಪಿ.ಜಿ. ಅವರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಎಕ್ಸಲೆಂಟ್ ವಿದ್ಯಾಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ.ಸಂಪತ್ ಕುಮಾರ್, ಮುಖ್ಯಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಶಿಕ್ಷಕ ನಿರಂಜನ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net