

ಗುಬ್ಬಿ: ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾಗಿರುವ ಟನೆ ಗುಬ್ಬಿ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ಶಿವಪ್ರಕಾಶ ಆರಾಧ್ಯ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ. ಸದ್ಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ತುರುವೇಕೆರೆ ಠಾಣೆಯಲ್ಲು ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.