ಐದು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

21sgr2 (1)
ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರ ತಂಡ.
Published on

ಸಾಗರ: ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಲವು ಮನೆಗಳ ಕಳ್ಳತನ ಪ್ರಕರಣಗಳು ಮೇಲಿಂದ ಮೇಲೆ ದಾಖಲಾಗಿದ್ದು ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಗರದ ಷಣ್ಮುಖ (22) ಹಾಗೂ ಒಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ. ಒಟ್ಟು 5 ಕಳ್ಳತನ ಪ್ರಕರಣದಲ್ಲಿ ಇವರು ಪಾಲ್ಗೊಂಡಿದ್ದು ಅಂದಾಜು 5.20 ಲಕ್ಷ ರೂ. ಬೆಲೆಬಾಳುವ ಬಂಗಾರ, ಬೆಳ್ಳಿಯ ಆಭರಣ ಮತ್ತು ಒಂದು ಸ್ಮಾರ್ಟ್ ಫೋನ್, ಕೃತ್ಯಕ್ಕೆ ಬಳಸಿದ ಹೋಂಡಾ ಕಂಪನಿಯ ಹೊಸದಾದ ಸ್ಕೂಟಿಯನ್ನು ಅಮಾನತು ಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಗೋಪಾಲಕೃಷ್ಣ ಟಿ.ನಾಯ್ಕ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net