

ತುಮಕೂರು: 2014-15ನೇ ಸಾಲಿನಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದಿದ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿತ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಇತ್ತೀಚೆಗೆ ದಾಖಲಿಸಿರುವ ಪ್ರಕರಣದ ಹಿನ್ನೆಲೆಯಲ್ಲಿ ತುಮಕೂರಿನ 10 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಿಕ್ಕನಾಯಕನಹಳ್ಳಿ ಬೋರನಕಣಿವೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ, ಕುಣಿಗಲ್ ಕೊಡವತ್ತಿ ಪ್ರೌಢಶಾಲೆ, ತಿಪಟೂರಿನ ಆಲ್ದೂರ್ ಪ್ರೌಢಶಾಲೆ, ಕುಣಿಗಲ್ ನಾಗಸಂದ್ರ ಪ್ರೌಢಶಾಲೆ, ಅಮೃತೂರು ಕರ್ನಾಟಕ ಪಬ್ಲಿಕ್ ಸ್ಕೂಲ್, ಕುಣಿಗಲ್ ಹೊಳಗೇರಿಪುರ ಶಾಲೆ, ತುರುವೇಕೆರೆಯ ಹುಲಿಕಲ್ ಸರ್ಕಾರಿ ಪ್ರೌಢಶಾಲೆ, ಚಿಕ್ಕನಾಯಕನಹಳ್ಳಿ ಕಮಲಾಪುರದ ಶಾಲೆ, ಗುಬ್ಬಿ ತಾಲೂಕಿನ ಕೆ.ಮತ್ತಿಘಟ್ಟ, ತುರುವೇಕೆರೆಯ ಹುಲಿಕೆರೆ ಸರ್ಕಾರಿ ಶಾಲೆಯಲ್ಲಿ ತಲಾ ಒಬ್ಬರು ಶಿಕ್ಷಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.