

ಹುಬ್ಬಳ್ಳಿ: ಮೂರು ಸಾವಿರ ಮಠದ ಉತ್ತರಾಧಿಕಾರಿ ವಿಚಾರದ ಹಿನ್ನೆಲೆಯಲ್ಲಿ ನಡೆಯುವ ಸತ್ಯದರ್ಶನ ಸಭೆಗೆ ಪಾಲ್ಗೊಳ್ಳಲು ಭಕ್ತರು ಮಠಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಠದಲ್ಲಿ ಬ್ಯಾರಿಕೇಡ್ ನಿರ್ಮಿಸಿ ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ಬಸವೇಶ್ವರ, ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ನಂತರ ಭಕ್ತರೊಂದಿಗೆ ಶಾಂತಿಯುತ ಮೆರವಣಿಗೆಯಲ್ಲಿ ಮಠದ ಆವರಣ ಪ್ರವೇಶ ಮಾಡಲಿದ್ದಾರೆ.
ಸಭೆಗೆ ಒಪ್ಪಿಗೆ ನೀಡದ ಮೂಜಗು: ಮಠದ ಆವರಣದಲ್ಲಿ ಸಭೆ ನಡೆಸಲು ಮೂರುಸಾವಿರ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ (ಮೂಜಗು) ಒಪ್ಪಿಗೆ ನೀಡಿಲ್ಲ.
ಶಿವರಾತ್ರಿ ಅಮವಾಸ್ಯೆಯ ನಿಮಿತ್ತ ಭಕ್ತರು ಕರ್ತೃ ಗದ್ದುಗೆ ದರ್ಶನ ಮಾಡಲು ಆಗಮಿಸುತ್ತಿದ್ದು, ಅವರಿಗೆ ಪ್ರತ್ಯೇಕ ಬ್ಯಾರಿಕೇಡ್ ನಿರ್ಮಿಸಿ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.
ಭಕ್ತರಿಗೆ ಮಠದ ಆವರಣಕ್ಕೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ. ಮಠದ ಒಳಭಾಗಕ್ಕೆ ಪೊಲೀಸರು ಭಕ್ತರನ್ನು ಬಿಡುತ್ತಿಲ್ಲ. (ದಿಗ್ವಿಜಯ ನ್ಯೂಸ್)