ಪಟ್ಲಬೆಟ್ಟ, ಮೂಕನಮನೆ ಜಲಪಾತಕ್ಕೆ ಪೊಲೀಸರ ನಿಯೋಜನೆ

4skpp1 patla betta
Published on

ಸಕಲೇಶಪುರ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಾಲೂಕಿನ ಹೆಸರಾಂತ ಪ್ರವಾಸಿ ಸ್ಥಳಗಳಾದ ಪಟ್ಲಬೆಟ್ಟ ಹಾಗೂ ಮೂಕನಮನೆ ಜಲಪಾತಕ್ಕೆ ಪ್ರವಾಸಿ ಮಿತ್ರ ಪೊಲೀಸರನ್ನು ನಿಯೋಜಿಸಲಾಗಿದೆ.


ತಾಲೂಕಿನ ವನಗೂರು ಗ್ರಾಪಂ ವ್ಯಾಪ್ತಿಯ ಪಟ್ಲಬೆಟ್ಟಕ್ಕೆ ಕಳೆದ 2 ವಾರಗಳ ಹಿಂದೆ ಪ್ರವಾಸಿಗರು ಹಾಗೂ ಸ್ಥಳೀಯ ಪಿಕ್‌ಅಪ್ ಮಾಲೀಕರ ನಡುವೆ ಕ್ಷುಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದುಪ್ರವಾಸಿಗರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಹಿನ್ನೆಲೆಯಲ್ಲಿ ಶಾಸಕ ಸಿಮೆಂಟ್ ಮಂಜು ಅರಣ್ಯ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಸಭೆಯಲ್ಲಿ ಪಟ್ಲಬೆಟ್ಟದಲ್ಲಿ ಪ್ರವಾಸಿ ಪೊಲೀಸರನ್ನು ನೇಮಿಸಲು ಚರ್ಚೆ ನಡೆಸಿದ್ದರು.


ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ತಿಪ್ಪೇಸ್ವಾಮಿ ಜಿಲ್ಲಾಧಿಕಾರಿ ಸತ್ಯಭಾಮಾ ಅವರ ಅನುಮತಿ ಪಡೆದು ಪಟ್ಲ ಹಾಗೂ ಮೂಕನಮನೆ ಜಲಪಾತದಲ್ಲಿ ಯಾವುದೇ ರೀತಿಯ ಅವಘಡಗಳು ನಡೆಯದಂತೆ ಹಾಗೂ ಪ್ರವಾಸಿ ಸ್ಥಳದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಪ್ರವಾಸಿಗರಿಗೆ ಮಾಹಿತಿ ನೀಡಲು ಪ್ರವಾಸಿ ಸ್ನೇಹಿ ಪೊಲೀಸರನ್ನು ನೇಮಿಸಲಾಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ತುಸು ನಿಯಂತ್ರಣಕ್ಕೆ ಬರುವ ಸಾಧ್ಯತೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net