ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, ಪ್ರಕರಣ ದಾಖಲು

Published on

ಪುತ್ತೂರು: ಸರ್ಕಾರಿ ಆಸ್ಪತ್ರೆ ವೈದ್ಯಾಽಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಬಂಽಸುವಂತೆ ಆಗ್ರಹಿಸಿ ಏ.೨೬ರಂದು ಬೆಳಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿ ಮುಖ್ಯರಸ್ತೆಯ ಮಧ್ಯದಲ್ಲಿ ಕುಳಿತು ಸುಗಮ ಸಂಚಾರಕ್ಕೆ ಮತ್ತು ಇತರ ವೈದ್ಯಕೀಯ ತುರ್ತು ಸೇವೆಗೆ ಅಡ್ಡಿ ಸಹಿತ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿರುವ ಆರೋಪದ ಮೇರೆಗೆ ಪ್ರತಿಭಟನಾಕಾರರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಟನಾಕಾರರು ಮಹಿಳಾ ಪೊಲೀಸ್ ಠಾಣೆ ಮುಂಭಾಗದಿಂದ ಬೊಳುವಾರು- ದರ್ಬೆ ಮುಖ್ಯ ರಸ್ತೆಗೆ ಏಕಾಏಕಿ ಬಂದು ರಸ್ತೆಯ ಮಧ್ಯದಲ್ಲಿ ಕುಳಿತು ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡಿದ್ದಲ್ಲದೆ, ಪೊಲೀಸರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net