ಗೋಕಳ್ಳರ ಮೇಲೆ ಗುಂಡಿನ ದಾಳಿ

Firing
Published on

ಪುತ್ತೂರು: ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಗೋಕಳ್ಳರ ವಾಹನ ನಿಲ್ಲಿಸಲು ಸೂಚಿಸಿದಾಗ ಪೊಲೀಸ್ ವಾಹನಕ್ಕೆ ಡಿಕ್ಕಿಹೊಡೆದಿದ್ದು, ಸಂಪ್ಯ ಪೊಲೀಸ್ ಉಪನಿರೀಕ್ಷಕ ಜಂಬೂರಾಜ್ ಈ ಸಂದರ್ಭ ಗುಂಡಿನ ದಾಳಿ ನಡೆಸಿದ್ದಾರೆ.

ಚಾಲಕ ದೇಲಂಪಾಡಿ ನಿವಾಸಿ ಅಬ್ದುಲ್ಲ ಗಾಯಾಳುವಾಗಿದ್ದಾನೆ. ಬುಧವಾರ ಬೆಳಗ್ಗಿನ ಜಾವ ಅಕ್ರಮವಾಗಿ ಲಾರಿ ಮೂಲಕ ಗೋಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಸಂಪ್ಯ ಪೊಲೀಸ್ ಉಪನಿರೀಕ್ಷಕ ಜಂಬೂರಾಜ್ ಕಾರ್ಯಾಚರಣೆಗೆ ಇಳಿದಿದ್ದು, ಅನುಮಾನಾಸ್ಪದ ವಾಹನ ನಿಲ್ಲಿಸಲು ಸೂಚನೆ ನೀಡಿದ್ದಾರೆ. ಇದನ್ನು ನಿರ್ಲಕ್ಷಿಸಿ ಪೊಲೀಸ್ ವಾಹನಕ್ಕೆ ಗುದ್ದಲಾಗಿದೆ.

ಈ ಸಂದರ್ಭ ಪೊಲೀಸರಿಂದ ಆತ್ಮರಕ್ಷಣೆಗಾಗಿ ಪ್ರತಿ ದಾಳಿಯಾಗಿ ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ಓರ್ವ ಗಾಯಗೊಂಡು ಇನ್ನೋರ್ವ ಪರಾರಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ಎಂದು ಹೇಳಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಾವಳಿಯ ಗೋಪೂಜೆ ದಿನವೇ ಈ ದಾಳಿ ನಡೆದಿದೆ. ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ತೆರಳಿ ತನಿಖೆಗೆ ಮುಂದಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net